LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ

ಬೆಳಗಾವಿ: ತೋಟಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಪ್ರತಿ ಹನಿಗೆ ಅಧಿಕ ಬೆಳೆ ಯೋಜನೆಯಡಿ ಹನಿ ನೀರಾವರಿ ವಿವಿಧ ರೀತಿಯ ತುಂತುರು ನೀರಾವರಿ ಘಟಕಕ್ಕೆ ಸಹಾಯಧನ ಲಭ್ಯವಿದ್ದು, ಕಾಫಿ, ಟೀ, ರಬ್ಬರ್ ಹಾಗೂ ಅಡಿಕೆ ಬೆಳೆಗಳನ್ನು ಹೊರತು ಪಡಿಸಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರಿಗೆ ಹನಿ ನೀರಾವರಿ ಅಳವಡಿಸಿ ಸಹಾಯಧನ ನೀಡಲಾಗುತ್ತಿದೆ.

ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಕೆಗೆ ಪ್ರತಿ ಫಲಾನುಭವಿಗಳಿಗೆ ಗರಿಷ್ಟ 5 ಹೆಕ್ಟರ್ ಪ್ರದೇಶದ ವರೆಗೆ ಸಹಾಯಧನ ನೀಡಲಾಗುವುದು ಹಾಗೂ ತರಕಾರಿ ಮತ್ತು ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟರ್ ಪ್ರದೇಶಕ್ಕೆ ಸಹಾಯಧನ ನೀಡಲಾಗುವುದು. ಎಲ್ಲ ವರ್ಗದ ರೈತರಿಗೆ ಮೊದಲು 2 ಹೆಕ್ಟರ್ ಪ್ರದೇಶದ ವರೆಗೆ ಶೇ. 90 ರಷ್ಟು ಮತ್ತು 2 ಹೆಕ್ಟರ್ ಮೇಲ್ಪಟ್ಟು 5 ಹೆಕ್ಟರ್ ವರೆಗೆ ಶೇ. 45% ಸಹಾಯಧನ ಸೌಲಭ್ಯವಿರುತ್ತದೆ.

ಹನಿ ನೀರಾವರಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕ ಅಳವಡಿಕೆಗೆ ಈಗಾಗಲೇ ಸಹಾಯಧನ ಪಡೆದು7 ವರ್ಷಗಳಾಗಿದ್ದಲ್ಲಿ ಪ್ರಸಕ್ತ ಸಾಲಿನಲ್ಲಿ ಕೂಡ ಮತ್ತೊಮ್ಮೆ ಹೊಸದಾಗಿ ಸೂಕ್ಷ್ಮ ನೀರಾವರಿ ಘಟಕ ಅಳವಡಿಸಿಕೊಂಡಲ್ಲಿ ಸಹಾಯಧನ ನೀಡಲಾಗುವುದು. ತೋಟಗಾರಿಕೆ ಬೆಳೆಗಳಿಗೆ ಇಲಾಖೆಯಿಂದ ನೋಂದಾಯಿತ ಕಂಪನಿಗಳಿಂದ ಮಾತ್ರ ಹನಿ ನೀರಾವರಿ ಘಟಕ ಅಳವಡಿಸಿಕೊಳ್ಳಲು ಕಡ್ಡಾಯವಾಗಿರುತ್ತದೆ.

ಹನಿ ನೀರಾವರಿ ಅಳವಡಿಸುವ ಪೂರ್ವ ತಾಲ್ಲೂಕಾ ತೋಟಗಾರಿಕೆ ಇಲಾಖೆಯಲ್ಲಿ ಹೆಸರು ನೋಂದಾಯಿತಿ ಕಾರ್ಯಾದೇಶ ಪಡೆಯತಕ್ಕದ್ದು ಹಾಗೂ ಅರ್ಜಿಗಳನ್ನು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಕಛೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಗೆ ಸಂಪರ್ಕಿಸುವಂತೆ ಮಾಹಾಂತೇಶ ಮುರಗೋಡ, ತೋಟಗಾರಿಕೆ ಜಂಟಿ ನಿರ್ದೇಶಕರು (ಜಿಪಂ) ಬೆಳಗಾವಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫೇಸ್​ಬುಕ್ ಪ್ರೀತಿ 7.05 ಲಕ್ಷ ರೂ. ವಂಚನೆಕಂಟ್ರಿ ಬಂದೂಕು ತಯಾರಿಕೆ ಮತ್ತು ಮಾರಾಟ ಜಾಲ ಭೇಧಿಸಿದ ಖಾನಾಪುರ ಪೊಲೀಸರುಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆರೈತರಿಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನಡಿಸಿಎಂಗಳ ಹುದ್ದೆ ಬೇಡವೇ ಬೇಡ – ಕಾಂಗ್ರೆಸ್ ಹೈಕಮಾಂಡ್ ಮುಂದೆ ಡಿಕೆಶಿ, ಸತೀಶ್ ಜಾರಕಿಹೊಳಿ ಪ್ರಸ್ತಾಪಸತ್ತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ – ವರದಿ ಕೇಳಿದ ರಾಜ್ಯ ಮಹಿಳಾ ಆಯೋಗಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿಡಿಕೆಶಿ ಅವಧಿಯಲ್ಲಾದರೂ ರಾಜ್ಯ ಅಭಿವೃದ್ಧಿ ಕಾಣಲಿ: ಅರವಿಂದ್ ಬೆಲ್ಲದ್ಅಕ್ರಮ ಅದಿರು ಸಾಗಾಟ; 2 ಕೇಸ್‌ಗಳಲ್ಲಿ ಜನಾರ್ದನ ರೆಡ್ಡಿಗೆ ರಿಲೀಫ್‌ರಾಜ್ಯಸಭೆ ಎಲೆಕ್ಷನ್ ಬಳಿಕ ಮೋದಿ ಕ್ಯಾಬಿನೆಟ್ ಪುನಾರಚನೆಗೆ ಪ್ಲ್ಯಾನ್