LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪರಪ್ಪನ ಅಗ್ರಹಾರ ಜೈಲಿನಿಂದ ಆಸ್ಪತ್ರೆಗೆ ಸಾಗಿಸುವಾಗ ಶಂಕಿತ ಉಗ್ರ ಸಾವು

ಬೆಂಗಳೂರು:ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ 2008ರ ಸರಣಿ ಬಾಂಬ್ ಸ್ಫೋಟ ಪ್ರಕರಣದ  ಶಂಕಿತ ಉಗ್ರ ಅಬ್ದುಲ್ ಖಾದರ್ (60) ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ.

ಮೂಲತಃ ಕೊಡಗು ಜಿಲ್ಲೆಯ ವಿರಾಜಪೇಟೆಯವನಾದ ಅಬ್ದುಲ್ ಖಾದರ್ 2008ರಲ್ಲಿ ಬೆಂಗಳೂರಿನ ಮಡಿವಾಳ ಸೇರಿದಂತೆ ವಿವಿಧೆಡೆ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳದಿಂದ  ಬಂಧಿತನಾಗಿದ್ದನು. 2010ರಿಂದ ಈತ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ವಿಚಾರಣೆ ಎದುರಿಸುತ್ತಿದ್ದನು.

ಇಂದು ಜೈಲಿನಲ್ಲಿದ್ದ ಅಬ್ದುಲ್ ಖಾದರ್ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿತ್ತು. ತೀವ್ರ ಅಸ್ವಸ್ಥಗೊಂಡ ಆತನನ್ನು ಜೈಲಿನ ಸಿಬ್ಬಂದಿ ತಕ್ಷಣವೇ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯದಲ್ಲೇ ಆತನಿಗೆ ತೀವ್ರ ಹೃದಯಾಘಾತ ಸಂಭವಿಸಿ ಕೊನೆಯುಸಿರೆಳೆದಿದ್ದಾನೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಅಬ್ದುಲ್ ಖಾದರ್ ಮೇಲಿನ ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ಅಂತಿಮ ಹಂತಕ್ಕೆ ತಲುಪಿತ್ತು. ಇನ್ನೇನು ಕೆಲವೇ ದಿನಗಳಲ್ಲಿ ಈತನಿಗೆ ಸಂಬಂಧಿಸಿದಂತೆ ಕೋರ್ಟ್‌ನಿಂದ ಮಹತ್ವದ ತೀರ್ಪು ಹೊರಬೀಳುವ ಸಾಧ್ಯತೆಯಿತ್ತು. ಆದರೆ ನ್ಯಾಯಾಲಯದಿಂದ ಶಿಕ್ಷೆಯ ಪ್ರಮಾಣ ಪ್ರಕಟವಾಗುವ ಮೊದಲೇ ಶಂಕಿತ ಉಗ್ರ ಸಾವನ್ನಪ್ಪಿದ್ದಾನೆ.

ಮೃತನ ದೇಹವನ್ನು ಸದ್ಯ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳು ಅಬ್ದುಲ್ ಖಾದರ್ ಕುಟುಂಬದ ಸದಸ್ಯರಿಗೆ ಅಧಿಕೃತ ಮಾಹಿತಿ ನೀಡಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿದುಬಂದಿದೆ.

Advertisement

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್​​ಶಿವಮೊಗ್ಗ ನಗರದಲ್ಲಿ ಮತ್ತೆ ರಕ್ತದೋಕುಳಿ – ಗ್ಯಾಂಗ್‌ವಾರ್‌ಗೆ ರೌಡಿಶೀಟರ್ ಬರ್ಬರ ಹತ್ಯೆಇಂದಿನಿಂದ ಧರ್ಮಸ್ಥಳಕ್ಕೆ ಹೊಸ ಪ್ಯಾಕೇಜ್ ಪರಿಚಯಿಸಿದ KSTDCರೈತರ ವಿರೋಧದ ನಡುವೆಯೂ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ: ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ಹೆಚ್‌ಡಿಕೆ ಆಕ್ರೋಶಮಗನ ನೆನೆದು ವೇದಿಕೆಯಲ್ಲೇ ಬಿಕ್ಕಿ ಬಿಕ್ಕಿ ಅತ್ತ ಜಿಟಿ ದೇವೇಗೌಡಶಿಕ್ಷಕನ ಋಣ ತೀರಿಸಿದ ಶಿಷ್ಯ: ಶುಲ್ಕ ಕಟ್ಟಿದ ಗುರುವಿಗೆ ನಿವೃತ್ತಿ ದಿನವೇ ಕಾರು ಉಡುಗೊರೆಪರಪ್ಪನ ಅಗ್ರಹಾರ ಜೈಲಿನಿಂದ ಆಸ್ಪತ್ರೆಗೆ ಸಾಗಿಸುವಾಗ ಶಂಕಿತ ಉಗ್ರ ಸಾವುಭಾರತದ ಹಡಗು ಮೇಲೆ ದಾಳಿ ನಡೆಸಿದ್ದು ಯಾರು? – ಇರಾನ್‌ ವಿರುದ್ಧ ಟ್ರಂಪ್‌ ಕೆಂಡಾಮಂಡಲಕರ್ತವ್ಯ ಲೋಪದ ಹಿನ್ನೆಲೆ ಅಮಾನತು – ಜೈಲರ್ ಆತ್ಮಹತ್ಯೆ