LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವಸ್ಥಾನಗಳೇ ಟಾರ್ಗೆಟ್‌ – ವಿಗ್ರಹ ಕದಿಯುತ್ತಿದ್ದ ಖದೀಮರು ಅರೆಸ್ಟ್‌

Advertisement

ಬೆಂಗಳೂರು: ದೇವಸ್ಥಾನಗಳನ್ನೇ ಗುರಿಯಾಗಿಸಿಕೊಂಡು ದೇವರ ವಿಗ್ರಹಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ತಲಘಟ್ಟಪುರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಬನ್ನೇರುಘಟ್ಟ ಹಾಗೂ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ ನಡೆಸಿದ್ದರು. ಇತ್ತೀಚೆಗೆ ದೇವಸ್ಥಾನಗಳಿಂದ ಒಟ್ಟು ನಾಲ್ಕು ಬೆಲೆಬಾಳುವ ವಿಗ್ರಹಗಳನ್ನು ಕದ್ದು ಎಸ್ಕೇಪ್ ಆಗಿದ್ದರು. ಆರೋಪಿಗಳು ಗಣೇಶ, ಆಂಜನೇಯ ಹಾಗೂ ಲಕ್ಷ್ಮೀ ನಾಗರ ವಿಗ್ರಹಗಳನ್ನು ಕಳ್ಳತನ ಮಾಡಿದ್ದರು ಎಂದು ತಿಳಿದುಬಂದಿದೆ.

ಕೇವಲ ದೇವಸ್ಥಾನಗಳಲ್ಲಷ್ಟೇ ಅಲ್ಲದೆ, ನಿರ್ಮಾಣ ಹಂತದಲ್ಲಿದ್ದ ಕಟ್ಟಡಗಳಿಗೂ ನುಗ್ಗಿ ದುಬಾರಿ ಯಂತ್ರೋಪಕರಣಗಳನ್ನು ಕಳವು ಮಾಡುತ್ತಿದ್ದರು. ಈ ಸಂಬಂಧ ತಲಘಟ್ಟಪುರ ಮತ್ತು ಬನ್ನೇರುಘಟ್ಟ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಾಚರಣೆ ನಡೆಸಿದ ತಲಘಟ್ಟಪುರ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಳವು ಮಾಡಲಾಗಿದ್ದ ನಾಲ್ಕೂ ದೇವರ ವಿಗ್ರಹಗಳು ಹಾಗೂ ನಿರ್ಮಾಣ ಹಂತದ ಕಟ್ಟಡಗಳಿಂದ ಕದ್ದಿದ್ದ ಇತರ ಮಾಲನ್ನು ವಶಪಡಿಸಿಕೊಳ್ಳಲಾಗಿದೆ.

ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
100 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟಬಡ ರೋಗಿಗಳಿಗೆ ಸೇರಬೇಕಿದ್ದ ಔಷಧಿಗಳು ತಿಪ್ಪೆ ಪಾಲುಇಂದಿನಿಂದ 108 ಅಂಬುಲೆನ್ಸ್ ನೌಕರರ ಮುಷ್ಕರ – ಸಾರ್ವಜನಿಕರಿಗೆ ಸಮಸ್ಯೆಯಾದ್ರೆ ಹುಷಾರ್ ಎಂದ ಖಾದರ್ಮನ್ಮುಲ್ ನಂದಿನಿ ಹಾಲಿನ ಪುಡಿ ಕಲಬೆರಕೆ ಪ್ರಕರಣ – ಮತ್ತೆ ಮೂವರ ಬಂಧನ, 11ಕ್ಕೇರಿದ ಆರೋಪಿಗಳ ಸಂಖ್ಯೆನಮ್ಮದು ಸೌಜನ್ಯದ ಭೇಟಿಯಷ್ಟೇ – ಸಿದ್ದರಾಮಯ್ಯವರದಕ್ಷಿಣೆ ಕಿರುಕುಳ ಆರೋಪ; ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆನವರಾತ್ರಿ ಸಂಭ್ರಮದ ನಡುವೆ ಅವಘಡ – ಭಕ್ತರ ಮೇಲೆ ಬಿದ್ದ ಬೃಹತ್ ಲೈಟ್ ಸೆಟ್ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿಅಂಜನಾದ್ರಿ ಬೆಟ್ಟದಿಂದ ಮುಜರಾಯಿ ಇಲಾಖೆಯ ಸಿಬ್ಬಂದಿ ಹೊರಕ್ಕೆ – ಎಲ್ಲ ಕಚೇರಿಗಳಿಗೆ ಬೀಗ ಜಡಿದ ವಿದ್ಯಾದಾಸ್ ಬಾಬಾಪಂಜಾಬ್‌ನಲ್ಲಿ ಡ್ರಗ್ಸ್ ವಿರೋಧಿ ಹೋರಾಟಗಾರನ ಹತ್ಯೆ; ಆರೋಪಿ ಅರೆಸ್ಟ್, ಅಂಗಡಿ ನೆಲಸಮ