LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪತ್ನಿ-ನಾದಿನಿಯ ಕತ್ತು ಕೊಯ್ದು ಭೀಕರ ಕೊಲೆ – ಮೂವರು ಮಕ್ಕಳೊಂದಿಗೆ ಪತಿ ಎಸ್ಕೇಪ್

Advertisement

ಚಿಕ್ಕಬಳ್ಳಾಪುರ: ಅಕ್ಕ-ತಂಗಿಯರನ್ನು ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರಜಿಲ್ಲೆಯ ಚಿಂತಾಮಣಿ ನಗರದ ಜೆ.ಜೆ. ಕಾಲೋನಿಯಲ್ಲಿ ನಡೆದಿದೆ.

25 ವರ್ಷದ ಶಮಾ ಮತ್ತು 21 ವರ್ಷದ ರೇಷ್ಮಾ ಕೊಲೆಯಾದ ಅಕ್ಕ-ತಂಗಿ ಮಹಿಳೆಯರು. ಮಾಹಿತಿ ತಿಳಿಯುತ್ತಿದ್ದಂತೆ ಚಿಂತಾಮಣಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿದ್ದರು ಎಂದು ತಿಳಿದುಬಂದಿದೆ.

ಮೃತ ಶಮಾ ಅವರ ಪತಿ ಏಜಾಜ್ ಮೇಲೆಯೇ ಕೊಲೆ ಶಂಕೆ ವ್ಯಕ್ತವಾಗಿದೆ. ಪತ್ನಿ ಹಾಗೂ ನಾದಿನಿಯ ಕತ್ತು ಕೊಯ್ದು ಹತ್ಯೆ ಮಾಡಿರುವ ಶಂಕೆ ಇದ್ದು, ಘಟನೆ ಬಳಿಕ ಮೂವರು ಮಕ್ಕಳನ್ನು ಕರೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ

ಗಾಂಜಾ ಮತ್ತಿನಲ್ಲೇ ಈ ಕೃತ್ಯ ನಡೆದಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಚಿಂತಾಮಣಿ ನಗರದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದ್ದು, ಪೊಲೀಸರು ಇದನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಚಿಂತಾಮಣಿ ನಗರ ಪೊಲೀಸರು ಆರೋಪಿಯ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದು, ಕೊಲೆಗೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾದಿ ಬೀದಿಯಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ಗೆ ಅನುಮತಿ ನೀಡಿದ್ದು ಯಾರು – ಸುರೇಶ್‌ಕುಮಾರ್‌ ಪ್ರಶ್ನೆನಿರ್ಭಯ ಕೇಸ್‌ನಲ್ಲಿದ್ದಂತವರಲ್ಲ ಇವರು, ಪೋಕ್ಸೋ ಆರೋಪಿಗಳನ್ನು ಬಿಡಿ – ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆರೈತರ ಜಮೀನುಗಳಲ್ಲಿ ಕೇಬಲ್ ಕಳ್ಳತನ – ಇಬ್ಬರು ಕಳ್ಳರನ್ನ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರುರಾಜ್ಯದಲ್ಲಿ SIR ಲೋಪ – ಬಿಜೆಪಿ, ಜೆಡಿಎಸ್‌ನ ಮೈತ್ರಿ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರುSIR ದುರ್ಬಳಕೆ ಮಾಡಿಕೊಂಡಿಲ್ಲ – ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದ ಯತೀಂದ್ರSIR ಪ್ರಕ್ರಿಯೆಯಲ್ಲಿ ನಾವ್ಯಾರು ಕೈ ಹಾಕಿಲ್ಲ, ಆದ್ರೆ ಆಯೋಗ ಮಾಡ್ತಿರೋ ಅಭಿಯಾನದಲ್ಲಿ ಭಿನ್ನಾಭಿಪ್ರಾಯ ಇದೆ: ಡಿಕೆಶಿಪತ್ನಿ-ನಾದಿನಿಯ ಕತ್ತು ಕೊಯ್ದು ಭೀಕರ ಕೊಲೆ – ಮೂವರು ಮಕ್ಕಳೊಂದಿಗೆ ಪತಿ ಎಸ್ಕೇಪ್ ಮೊಬೈಲ್ ಟಾರ್ಚ್‌ ಹಿಡಿದು KKRTC ಬಸ್‌ ಚಾಲನೆ – ಮೂವರು ಅಮಾನತುರಾಮ ಮಂದಿರ ದೇಣಿಗೆ ಹಗರಣ| ಚಂಪತ್ ರಾಯ್ ರಾಜೀನಾಮೆ ಅಂಗೀಕಾರ; ಬಜರಂಗ್ ಬಾಗ್ರ ಹೊಸ ಪ್ರಧಾನ ಕಾರ್ಯದರ್ಶಿಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್ ವಾರ್ – ಭೀಕರ ಘರ್ಷಣೆಗೆ 25 ಕೈದಿಗಳು ಬಲಿ, 100ಕ್ಕೂ ಹೆಚ್ಚು ಜನರಿಗೆ ಗಾಯ