LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕಾಶ್ಮೀರಿ ಪಂಡಿತರಿಗೆ ಉದ್ಯೋಗ ತೊರೆಯಲು ಉಗ್ರರ ಬೆದರಿಕೆ

Advertisement

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಕೆಲಸ ಮಾಡುತ್ತಿರುವ ಕಾಶ್ಮೀರಿ ಪಂಡಿತ  ಸಮುದಾಯದ ಸರ್ಕಾರಿ ನೌಕರರಿಗೆ ಉಗ್ರ ಸಂಘಟನೆಗಳಿಂದ ಮತ್ತೊಮ್ಮೆ ಬೆದರಿಕೆ ಬಂದಿದೆ.

 

ಲಷ್ಕರ್-ಎ-ತಯ್ಬಾ ಜೊತೆಗೆ ಸಂಪರ್ಕ ಹೊಂದಿರುವ ಯುನೈಟೆಡ್ ಲಿಬರೇಷನ್ ಕೌನ್ಸಿಲ್ ಪ್ರಧಾನ ಮಂತ್ರಿ ಪ್ಯಾಕೇಜ್ ಅಡಿ ನೇಮಕಗೊಂಡಿರುವ ಕಾಶ್ಮೀರಿ ಪಂಡಿತ ನೌಕರರಿಗೆ ಕೆಲಸ ತೊರೆಯುವಂತೆ ಎಚ್ಚರಿಕೆ ನೀಡಿದೆ. ಕೆಲಸ ಮುಂದುವರಿಸಿದರೆ ಜೀವಕ್ಕೆ ಅಪಾಯ ಎದುರಾಗಲಿದೆ ಎಂದು ಬೆದರಿಕೆ ಹಾಕಲಾಗಿದೆ.

ಮಾಹಿತಿಯ ಪ್ರಕಾರ, ಸುಮಾರು 7 ಸಾವಿರ ಕಾಶ್ಮೀರಿ ಪಂಡಿತ ಉದ್ಯೋಗಿಗಳು ಉಗ್ರರ ಬೆದರಿಕೆಯ ವ್ಯಾಪ್ತಿಯಲ್ಲಿದ್ದಾರೆ. ಉದ್ಯೋಗಿಗಳ ಮೊಬೈಲ್‌ ಸಂಖ್ಯೆ, ಮನೆ ವಿಳಾಸ ಮತ್ತು ವಾಹನ ನೋಂದಣಿ ಸಂಖ್ಯೆಯಂತಹ ವೈಯಕ್ತಿಕ ಮಾಹಿತಿಯನ್ನು ಭಯೋತ್ಪಾದಕ ಸಂಘಟನೆ ಆನ್‌ಲೈನ್‌ನಲ್ಲಿ ಸೋರಿಕೆ ಮಾಡಿದೆ.

ಕೆಲವು ಬೆದರಿಕೆ ಪತ್ರಗಳು ಮೊದಲು ಡಾರ್ಕ್ ವೆಬ್‌ನಲ್ಲಿ ಕಾಣಿಸಿಕೊಂಡು ಬಳಿಕ ವಾಟ್ಸ್‌ಆ್ಯಪ್ ಮತ್ತು ಟೆಲಿಗ್ರಾಂ ಮೂಲಕ ಹರಿದಾಡಿವೆ. ಇದರಿಂದ ವೈಯಕ್ತಿಕ ಮಾಹಿತಿಯ ಸೋರಿಕೆಯ ಮೂಲ ಪತ್ತೆಹಚ್ಚುವುದು ಮತ್ತು ಅದರ ಹಿಂದೆ ಇರುವ ಜಾಲವನ್ನು ಬಯಲಿಗೆಳೆಯುವುದು ಭದ್ರತಾ ಸಂಸ್ಥೆಗಳಿಗೆ ಸವಾಲಾಗಿದೆ. 

ಕಳೆದ ಒಂದು ತಿಂಗಳಲ್ಲಿ ಕಾಶ್ಮೀರಿ ಪಂಡಿತ ಸರ್ಕಾರಿ ನೌಕರರನ್ನು ಗುರಿಯಾಗಿಸಿಕೊಂಡು ಕನಿಷ್ಠ ಐದು ಬೆದರಿಕೆ ಪತ್ರಗಳು ಹೊರಬಂದಿವೆ ಎನ್ನಲಾಗಿದೆ. ಸೆಪ್ಟೆಂಬರ್ 5ರಂದು ಬೆದರಿಕೆ ಪತ್ರ ಹಿನ್ನಲೆ ಸೆಪ್ಟೆಂಬರ್ 6ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ, ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹಾಗೂ ಪೊಲೀಸ್ ಸೈಬರ್ ಕ್ರೈಂ ವಿಭಾಗಕ್ಕೆ ದೂರು ಸಲ್ಲಿಸಲಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾಲು ಸಂಗ್ರಹದಲ್ಲಿ ಬೆಮೂಲ್ ಐತಿಹಾಸಿಕ ದಾಖಲೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಹಾಸನಾಂಬ ದೇಗುಲದ ಆವರಣದಲ್ಲಿ ಅವಘಡ, ವಿದ್ಯುತ್ ಶಾಕ್‌ಗೆ ಪ್ರಜ್ಞೆತಪ್ಪಿದ ಕಾರ್ಮಿಕಆರೋಗ್ಯಕರ ಜೀವನಕ್ಕೆ ಸತ್ವಯುತ ಆಹಾರವೇ ಅಡಿಪಾಯ: ಡಾ. ದಿಲೀಪ್ ನಾಟೇಕರರೋಗಿಗಳ ಗುಣಮುಖತೆಗೆ ಆಳವಾದ ಅಧ್ಯಯನ, ಸಮಗ್ರ ಚಿಕಿತ್ಸಾ ವಿಧಾನ ಅಗತ್ಯ: ಡಾ. ಶ್ರೀಪಾದ ಖೆಡೇಕರಮಾರಿಹಾಳ-ಸುಳೇಭಾವಿಯಲ್ಲಿ ನೇಕಾರರ ಪತ್ತಿನ ಸಹಕಾರ ಸಂಘದ ನೂತನ ಶಾಖೆ ಉದ್ಘಾಟಿಸಿದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ಅವರೊಳ್ಳಿ ರುದ್ರಸ್ವಾಮಿ ಮಠದಿಂದ ರಾಜಹಂಸಗಡ ಕೋಟೆವರೆಗೆ ಪಾದಯಾತೆ ಸಂಪನ್ನ್ಕಚೇರಿ ಅವಧಿಯಲ್ಲಿ ಢಾಬಾದಲ್ಲಿ ಕುಳಿತು ಮದ್ಯ ಸೇವಿಸಿದ ಖಾನಾಪುರ ತಹಸೀಲ್ದಾರ್ ವಿರುದ್ಧ ಕ್ರಮಕ್ಕೆ ಆಗ್ರಹಸುಳೇಭಾವಿಯಲ್ಲಿ ₹1.68 ಕೋಟಿ ವೆಚ್ಚದಲ್ಲಿ ಶ್ರೀ ಮಹಾರಾಣಿ ದೇವಿ ದೇವಸ್ಥಾನ ನಿರ್ಮಾಣಕ್ಕೆ ಚಾಲನೆದಲಿತ ನಾಯಕರ ಏಳಿಗೆ ಸಹಿಸಲು ಬಿಜೆಪಿಗೆ ಆಗುತ್ತಿಲ್ಲ- ಜಾರಕಿಹೊಳಿ ಪರ ಡಿಕೆಶಿ ಬ್ಯಾಟಿಂಗ್‌