LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನ ಮೂವರು ಯುವಕರು ಹೇಮಾವತಿ ನದಿಯಲ್ಲಿ ಮುಳುಗಿ ಸಾವು

Advertisement
Advertisement

ಹಾಸನ: ಗೊರೂರಿನ ಬಳಿ ಈಜಲು ಹೇಮಾವತಿ ನದಿಗೆ ಇಳಿದಿದ್ದ ಬೆಂಗಳೂರು  ಮೂಲದ ಮೂವರು ಯುವಕರು ನೀರು ಪಾಲಾಗಿದ್ದಾರೆ.

ಚರಣ್ (20), ಮಿಲನ್ (23), ಮಣಿಕಂಠ (20) ಮೃತ ಯುವಕರು. ಆರು ಯುವಕರು ಹಾಗೂ ನಾಲ್ವರು ಯುವತಿಯರು ಒಟ್ಟಾಗಿ ಐದು ಸ್ಕೂಟಿಯಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳಿ ವಾಪಾಸ್ ಆಗುತ್ತಿದ್ದರು. ಬರುವಾಗ ಗೂಗಲ್ ಮ್ಯಾಪ್‌ನಲ್ಲಿ ಪ್ರವಾಸಿ ತಾಣ ಹುಡುಕಿ ಹೇಮಾವತಿ ಹಿನ್ನೀರಿನಲ್ಲಿರುವ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ಬಂದಿದ್ದರು.

ಚರ್ಚ್ ಬಳಿ ಹೇಮಾವತಿ ನದಿಯ ಹಿನ್ನೀರಿಯಲ್ಲಿ ಈಜಲು ಮೂವರು ಯುವಕರು ಇಳಿದಿದ್ದರು. ಉಳಿದವರು ದಡದಲ್ಲಿ ಕುಳಿತಿದ್ದರು. ಈಜು ಬಾರದ ಕಾರಣ ಮೂವರು ಯುವಕರು ನೀರಿನಲ್ಲಿ ‌ಮುಳುಗಿದ್ದಾರೆ. ಕೂಡಲೇ ಉಳಿದ ಸ್ನೇಹಿತರು ನೀರಿನಲ್ಲಿ ಮುಳುಗುವುದನ್ನು ಕಂಡು ಕಿರುಚಾಡಿದ್ದಾರೆ. ಆದರೆ ಇವರನ್ನು ಹೊರತುಪಡಿಸಿ ಬೇರೆ ಯಾರು ಸ್ಥಳದಲ್ಲಿ ಇರಲಿಲ್ಲ.‌ ಯಾರಿಗೂ ಈಜು ಬಾರದೇ ಇದ್ದಿದ್ದರಿಂದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಅಗ್ನಿಶಾಮಕದಳದ‌ ಸಿಬ್ಬಂದಿ ಹಾಗೂ ಪೊಲೀಸರು ಇಬ್ಬರ ಯುವಕರ ಶವವನ್ನು ಹೊರತೆಗೆದಿದ್ದಾರೆ. ಕತ್ತಲಾಗಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ. ಸೋಮವಾರ ಬೆಳಗ್ಗೆ ಮತ್ತೋರ್ವ ಯುವಕನ ಶವ ಶೋಧ ಕಾರ್ಯ ಮುಂದುವರೆಯಲಿದೆ. ಸ್ಥಳಕ್ಕೆ ಗೊರೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಡಿಕೆಶಿ ಸ್ಪಷ್ಟನೆಯಾವ ಆಣೆ ಪ್ರಮಾಣ, ಎಲ್ಲಿಗೆ ಕರೆದುಕೊಂಡು ಹೋಗ್ತಾರೆ – ಬಾಲಕೃಷ್ಣ ವಿರುದ್ಧ ಹರಿಹಾಯ್ದ ಹೆಚ್‌ಡಿಕೆಬೇಕಾಬಿಟ್ಟಿ ಗ್ಯಾರಂಟಿ ಕೊಡೋದ್ರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತೆ: ನಿರ್ಮಲಾ ಸೀತಾರಾಮನ್‌ಬೆಂಗಳೂರಲ್ಲಿ ಪ್ರಿಯತಮೆಯ ಕತ್ತು ಹಿಸುಕಿ ಕೊಲೆ – ವಿಷ ಸೇವಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರಬೆಂಗಳೂರಿನ ಮೂವರು ಯುವಕರು ಹೇಮಾವತಿ ನದಿಯಲ್ಲಿ ಮುಳುಗಿ ಸಾವುಸಂಪ್‌ಗೆ ಬಿದ್ದು ಮಗು ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ – ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದ ಲಕ್ಷ್ಮೀ ಹೆಬ್ಬಾಳಕರ್ತುಷ್ಪಥ ರಸ್ತೆ ಕಾಮಗಾರಿ ವೀಕ್ಷಿಸಿದ ಸಂಸದ ಶೆಟ್ಟರ್