LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆಯೇ ಜಿ.ಪಂ., ತಾ.ಪಂ. ಮೀಸಲು ಪ್ರಾಥಮಿಕ ಕರಡು ಅಧಿಸೂಚನೆ: ಈಶ್ವರ ಖಂಡ್ರೆ

Advertisement

ಚಿಕ್ಕಮಗಳೂರು: ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲು ಪೂರ್ಣಗೊಂಡಿದ್ದು, ನಾಳೆಯೊಳಗೆ ಪ್ರಾಥಮಿಕ ಕರಡು ಅಧಿಸೂಚನೆ ಹೊರಬೀಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ  ತಿಳಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಅವರು, ಮೊದಲಿಗೆ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು. ನಮ್ಮ ಸರ್ಕಾರ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಬದ್ಧವಾಗಿದ್ದು, ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಪ್ರಾಥಮಿಕ ಕರಡು ಅಧಿಸೂಚನೆ ಹೊರಡಿಸಿದ ತರುವಾಯ ಆಕ್ಷೇಪಣೆ ಸಲ್ಲಿಕೆಗೆ 10 ದಿನಗಳ ಕಾಲಾವಕಾಶ ನೀಡಲಾಗುವುದು. ನಂತರ ರಾಜ್ಯ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಚುನಾವಣೆ ನಡೆಸುವ ಜವಾಬ್ದಾರಿ ಆಯೋಗ ನಿರ್ವಹಿಸುತ್ತದೆ ಎಂದರು. 

ವರ್ಷಾಂತ್ಯದೊಳಗೆ ಜಿ.ಪಂ., ತಾಪಂ ಚುನಾವಣೆ ಖಚಿತವಾಗಿ ನಡೆಯುತ್ತದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಎಸ್‌ಐಆರ್. ಪ್ರಕ್ರಿಯೆ ನಡೆಯುತ್ತಿದ್ದು, ಅಂತಿಮ ಮತದಾರರ ಪಟ್ಟಿಯನ್ನು ನೀಡಲು ಕೇಂದ್ರ ಚುನಾವಣಾ ಆಯೋಗ ವಿಳಂಬ ಮಾಡಿದರೆ, ಜನವರಿ ತಿಂಗಳಲ್ಲಿ ಚುನಾವಣೆ ಆಗಬಹುದು ಎಂದು ತಿಳಿಸಿದರು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಧ್ಯಾಹ್ನ ಭೋಜನಕೂಟ, ಸಂಜೆ ಆಗ್ತಿದಂಗೆ ಜಂತರ್ ಮಂತರ್‌ನತ್ತ ಹೊರಟ ಸಂಸದರುದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆಕೆಪಿಎಸ್‌ಸಿ ಹಗರಣ ಕೇಸ್; ಶಿವಶಂಕರಪ್ಪ, ಗೀತಾ 13 ದಿನ ಇ.ಡಿ ಕಸ್ಟಡಿಗೆನಾಳೆಯೇ ಜಿ.ಪಂ., ತಾ.ಪಂ. ಮೀಸಲು ಪ್ರಾಥಮಿಕ ಕರಡು ಅಧಿಸೂಚನೆ: ಈಶ್ವರ ಖಂಡ್ರೆSIR ವಿವಾದ | ವಿಜಯ್‌ಗೆ ಹೆದರುತ್ತಿದ್ದೀರಾ?- ರಾಹುಲ್ ಮೌನಕ್ಕೆ ಡಿಎಂಕೆ ಆಕ್ರೋಶರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ಮಾಡಿದೆ: ಬೊಮ್ಮಾಯಿಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ.ವಿಜಯೇಂದ್ರರಾಹುಲ್‌, ಪ್ರಿಯಾಂಕಾ ಗಾಂಧಿ ಮತ್ತೆ ಪೊಲೀಸರ ವಶಕ್ಕೆ; ಬಸ್‌ ಟೈರ್‌ ಪಂಕ್ಚರ್‌ ಮಾಡಿದ ‘ಕೈ’ ಕಾರ್ಯಕರ್ತರುನಡುರಾತ್ರಿ ಚನ್ನಪಟ್ಟಣ ಆಸ್ಪತ್ರೆಗೆ ಯು.ಟಿ ಖಾದರ್‌ ಭೇಟಿ – ಸಿಬ್ಬಂದಿಗೆ ತರಾಟೆಮೈಸೂರು ಅರಮನೆಗೆ ನಟಿ ಕಾಜಲ್ ಅಗರ್ವಾಲ್ ಭೇಟಿ – ಸೆಲ್ಫಿಗೆ ಮುಗಿಬಿದ್ದ ಜನ