ಬೆಂಗಳೂರು: ಉಮರ್ ಖಾಲಿದ್ ರಾಷ್ಟ್ರೀಯವಾದಿ ಅವರ ಬಗ್ಗೆ ಮಾತನಾಡುವ ನೈತಿಕತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ಗೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ನಲ್ಲಿ ಉಮರ್ ಖಾಲಿದ್ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಉಮರ್ ಖಾಲಿದ್ ರಾಷ್ಟ್ರೀಯವಾದಿ. ಎಬಿವಿಪಿಗೆ ಉಮರ್ ಖಾಲಿದ್ ಬಗ್ಗೆ ಮಾತನಾಡಲು ಯಾವುದೇ ಹಕ್ಕಿಲ್ಲ ಅಂತ ಸಿಟ್ಟು ಹೊರಹಾಕಿದರು.
ಎಬಿವಿಪಿ ನಾಥೂರಾಮ್ ಗೋಡ್ಸೆಯನ್ನು ಆರಾಧಿಸುತ್ತದೆ. ನಾಥೂರಾಮ್ ಗೋಡ್ಸೆ ದೇಶ ವಿರೋಧಿ ದೇಶದ ಮೊದಲ ಭಯೋತ್ಪಾದಕ. ಉಮರ್ ಖಾಲಿದ್ ಬಗ್ಗೆ ಮಾತನಾಡಲು ಎವಿವಿಪಿ ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
