LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಹೊಂಡದಲ್ಲಿ ಮುಳುಗಿ ಚಿಕ್ಕಪ್ಪ-ಮಗನ ದುರ್ಮರಣ

Advertisement

ಕಲಬುರಗಿ: ಜಿಲ್ಲೆಯ ಸೇಡಂ ತಾಲ್ಲೂಕಿನ ಮುಗನೂರ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಮುಳುಗಿ ಚಿಕ್ಕಪ್ಪ ಹಾಗೂ ಮಗ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತರನ್ನು ಮುಗನೂರ ಗ್ರಾಮದ ಭದ್ರಸ್ವಾಮಿ (32) ಹಾಗೂ ಸದಾಶಿವ ಸ್ವಾಮಿ (10) ಎಂದು ಗುರುತಿಸಲಾಗಿದೆ.

ನಿನ್ನೆ ಎಮ್ಮೆ ಮೇಯಿಸಲು ತೆರಳಿದ್ದ ಭದ್ರಸ್ವಾಮಿ ಮತ್ತು ಸದಾಶಿವ ಸ್ವಾಮಿ ಸಂಜೆ ವೇಳೆಗೆ ಮನೆಗೆ ವಾಪಸ್ಸಾಗಿರಲಿಲ್ಲ. ಆದರೆ, ಅವರು ಮೇಯಿಸಲು ಕರೆದೊಯ್ದ ಎಮ್ಮೆಗಳು ಮಾತ್ರ ಗ್ರಾಮಕ್ಕೆ ಮರಳಿದ್ದರಿಂದ ಕುಟುಂಬಸ್ಥರಿಗೆ ಅನುಮಾನ ಉಂಟಾಗಿದೆ.

ತಕ್ಷಣ ಗ್ರಾಮಸ್ಥರು ಮತ್ತು ಕುಟುಂಬ ಸದಸ್ಯರು ಹುಡುಕಾಟ ನಡೆಸಿದ ವೇಳೆ ಗ್ರಾಮದ ಹೊರವಲಯದಲ್ಲಿರುವ ಕೃಷಿ ಹೊಂಡದ ಬಳಿ ಅವರ ಬಟ್ಟೆ ಹಾಗೂ ಮೊಬೈಲ್ ಪತ್ತೆಯಾಗಿದೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಸತತ ಕಾರ್ಯಾಚರಣೆ ನಡೆಸಿದ ಅವರು ಕೃಷಿ ಹೊಂಡದಿಂದ ಇಬ್ಬರ ಶವಗಳನ್ನು ಹೊರತೆಗೆದಿದ್ದಾರೆ.

ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯ ಸರ್ಕಾರಿ ನೌಕರರಿಗೆ ಇಲ್ವಾ ಗ್ಯಾರಂಟಿ?ಜೈಲಿನಲ್ಲಿ ಪ್ರಾಣಾಯಾಮ, ಶವಾಸನ ಮಾಡಿದ ದರ್ಶನ್‌ಮೈಸೂರು ರೈಲು ನಿಲ್ದಾಣದಲ್ಲಿ 40ಕ್ಕೂ ಹೆಚ್ಚು ಶಂಕಿತ ಬಾಂಗ್ಲಾ ವಲಸಿಗರು ಪತ್ತೆ – ತೀವ್ರ ವಿಚಾರಣೆಅಡ್ಡ ಮತದಾನ ಮಾಡಿದ್ದು ಸಾಬೀತಾದರೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಚಂದ್ರು ಲಮಾಣಿ51 ವರ್ಷಗಳಿಂದ ಹಿಡಕಲ್ ಜಲಾಶಯದಲ್ಲಿ ಮುಳುಗಡೆಯಾಗಿದ್ದ ದೇವಸ್ಥಾನ ಮತ್ತೆ ಗೋಚರ!ಮನೆಯ ಬೀಗ ಮುರಿದು ಕಳ್ಳತನ – 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ದೋಚಿ ಪರಾರಿಭೀಮಾತೀರದಲ್ಲಿ 6 ಜನರ ಹತ್ಯೆ ಪ್ರಕರಣ – ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟುಹೆಚ್‌ಸಿಜಿ ಕ್ಯಾನ್ಸರ್ ಆಸ್ಪತ್ರೆಗೆ ಬಿಗ್ ಶಾಕ್: ಕ್ಲಿನಿಕಲ್ ಟ್ರಯಲ್ ನಡೆಸದಂತೆ ಕೇಂದ್ರ ಸರ್ಕಾರದಿಂದ 2 ವರ್ಷ ನಿಷೇಧಶೀಘ್ರವೇ ಬಸ್‌ ಟಿಕೆಟ್ ದರ ಏರಿಕೆ – BMTC 44%, KSRTC 33% ರಷ್ಟು ಹೆಚ್ಚಳಕ್ಕೆ ಪ್ರಸ್ತಾಪಧೈರ್ಯವಿದ್ದರೆ ನನ್ನ ಜೊತೆ ಭೈರಮಂಗಲಕ್ಕೆ ಬನ್ನಿ, ರೈತರ ಜೊತೆ ಮಾತನಾಡೋಣ – ಡಿಕೆಶಿಗೆ ಹೆಚ್‌ಡಿಕೆ ಸವಾಲು