ದಾವಣಗೆರೆ: ಹರಿಹರದ ( ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು ದಾವಣಗೆರೆಯ ವಿಶೇಷ ಪೋಕ್ಸೋ ನ್ಯಾಯಾಲಯ ಜೂನ್ 30ಕ್ಕೆ ಕಾಯ್ದಿರಿಸಿದೆ.
ವಚನಾನಂದ ಸ್ವಾಮೀಜಿ ಪಡೆದಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಹರಿಹರ ಗ್ರಾಮಾಂತರ ಠಾಣೆಯ ಪೊಲೀಸರು ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಜಾಮೀನು ರದ್ದು ಅರ್ಜಿ ವಿಚಾರಣೆ ಕಳೆದ ಜೂ.11 ರಂದು ನಡೆದಿತ್ತು. ಈಗ ಹೈಕೋರ್ಟ್‌ನಲ್ಲಿ ಜೂ.23ಕ್ಕೆ ವಚನಾನಂದ ಸ್ವಾಮೀಜಿ ಜಾಮೀನು ಅರ್ಜಿ ವಿಚಾರಣೆ ಇದ್ದು, ಹೈಕೋರ್ಟ್ ಅದೇಶದ ಬಳಿಕ ಜಿಲ್ಲಾ ಪೋಕ್ಸೋ ನ್ಯಾಯಾಲಯ ಜೂನ್ 30ಕ್ಕೆ ತೀರ್ಪನ್ನು ಪ್ರಕಟಿಸಲಿದೆ ಎಂದು ಸ್ವಾಮೀಜಿ ಪರ ವಕೀಲ ಎಸ್.ವಿ ಪಾಟೀಲ್ ತಿಳಿಸಿದರು.
ಸಂತ್ರಸ್ತ ಬಾಲಕನ ತಾಯಿ ಹೈಕೋರ್ಟ್ (High Court) ಮೆಟ್ಟಿಲೇರಿರುವುದು ಜಿಲ್ಲಾ ನ್ಯಾಯಾಲಯದ ಆದೇಶ ತಡವಾಗಲು ಕಾರಣವಾಗಿದೆ. ಕಳೆದ ಜೂ.6 ರಂದೇ ಸಂತ್ರಸ್ತ ಬಾಲಕನ ತಾಯಿ ವಚನಾನಂದ ಸ್ವಾಮೀಜಿಗೆ ನೀಡಿರುವ ಜಾಮೀನನ್ನು ರದ್ದು ಮಾಡುವಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ವಿಚಾರವನ್ನು ದೂರುದಾರರು ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ತಿಳಿಸಿರಲಿಲ್ಲ. ಅದ್ದರಿಂದ ಇಂದಿನ ಅದೇಶ ಮುಂದೂಡಿಕೆಯಾಗಿದೆ.
ಹೈಕೋರ್ಟ್‌ನಲ್ಲಿ ಜೂ.23 ರಂದು ಜಾಮೀನು ರದ್ದತಿ ಅರ್ಜಿಯ ವಿಚಾರಣೆ ನಡೆಯಲಿದ್ದು, ಖುದ್ದಾಗಿ ವಚನಾನಂದ ಶ್ರೀಗಳು ತಮ್ಮ ವಕೀಲರ ಜೊತೆ ಹೈಕೋರ್ಟ್‌ಗೆ ಹಾಜರಾಗಲಿದ್ದಾರೆ.




