LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Advertisement

ಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ ರಾಜಕೀಯ ಜಟಾಪಟಿ ತೀವ್ರಗೊಂಡಿರುವ ನಡುವೆಯೇ, ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಹತ್ವದ ಸೂಚನೆ ನೀಡಿದ್ದಾರೆ.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 26ನೇ ಘಟಿಕೋತ್ಸವದಲ್ಲಿ ವಂದೇ ಮಾತರಂ ಗೀತೆಯ ಪೂರ್ಣ ಆವೃತ್ತಿಯನ್ನು ಹಾಡುವಂತೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್. ವಿದ್ಯಾಶಂಕರ್ ಅವರಿಗೆ ರಾಜ್ಯಪಾಲರು ಖಡಕ್ ನಿರ್ದೇಶನ ನೀಡಿದ್ದಾರೆ.

ಸೆಪ್ಟೆಂಬರ್ 26ರಂದು ವಿಟಿಯು ಕ್ಯಾಂಪಸ್‌ನಲ್ಲಿ 26ನೇ ಘಟಿಕೋತ್ಸವ ಸಮಾರಂಭ ಆಯೋಜನೆಯಾಗಿದೆ. ಕಾರ್ಯಕ್ರಮದ ಉದ್ಘಾಟನೆ ವೇಳೆ 3 ನಿಮಿಷ 10 ಸೆಕೆಂಡ್‌ಗಳಿರುವ ವಂದೇ ಮಾತರಂ ಗೀತೆಯ ಸಂಪೂರ್ಣ ಆವೃತ್ತಿಯನ್ನೇ ಪ್ರಸ್ತುತಪಡಿಸಬೇಕು ಎಂದು ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರು ಆದೇಶಿಸಿದ್ದಾರೆ.

ರಾಜ್ಯಪಾಲರ ಈ ನಿರ್ದೇಶನದ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಟಿಯು ಕುಲಪತಿ ಪ್ರೊ. ವಿದ್ಯಾಶಂಕರ್, “ವಿಶ್ವವಿದ್ಯಾಲಯಗಳ ಕುಲಾಧಿಪತಿಗಳಾದ ಗೌರವಾನ್ವಿತ ರಾಜ್ಯಪಾಲರು ನಮಗೆ ಸ್ಪಷ್ಟ ಆದೇಶ ನೀಡಿದ್ದಾರೆ. ಅವರ ಆದೇಶವನ್ನು ನಾವು ಕಡ್ಡಾಯವಾಗಿ ಪಾಲಿಸುತ್ತೇವೆ. ಘಟಿಕೋತ್ಸವದ ಆರಂಭದಲ್ಲಿ 3 ನಿಮಿಷ 10 ಸೆಕೆಂಡ್‌ಗಳ ಪೂರ್ಣ ವಂದೇ ಮಾತರಂ ಹಾಡನ್ನು ಪ್ರಸಾರ ಮಾಡುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ. 

ರಾಜ್ಯದಲ್ಲಿ ಇತ್ತೀಚೆಗೆ ಸರ್ಕಾರಿ ಹಾಗೂ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಕ್ಷಿಪ್ತ ರೂಪ ಅಥವಾ ನಿರ್ದಿಷ್ಟ ಚರಣಗಳನ್ನು ಹಾಡುವ ಕುರಿತು ಭಿನ್ನಾಭಿಪ್ರಾಯಗಳು ತಲೆದೋರಿದ್ದು, ಇದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

ಈ ರಾಜಕೀಯ ಹಗ್ಗಜಗ್ಗಾಟದ ನಡುವೆಯೇ ಉನ್ನತ ಶಿಕ್ಷಣ ಸಂಸ್ಥೆಯಾಗಿರುವ ವಿಟಿಯು ಘಟಿಕೋತ್ಸವದಲ್ಲಿ ಸಂಪೂರ್ಣ ಗೀತೆಯನ್ನು ಕಡ್ಡಾಯವಾಗಿ ಹಾಡಿಸಲು ರಾಜ್ಯಪಾಲರು ಮುಂದಾಗಿರುವುದು ರಾಜಕೀಯ ಮತ್ತು ಶೈಕ್ಷಣಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸರ್ಕಾರಿ ಶಾಲೆಯಲ್ಲಿ ನಿಗೂಢ ಸ್ಫೋಟ – ಗೋಡೆ ಕುಸಿದು ಅಡುಗೆ ಸಿಬ್ಬಂದಿಗೆ ಗಾಯಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ನಿಗಮಗಳಿಗೆ 8 ಸಾವಿರ ಕೋಟಿ ನಷ್ಟ1 ಲಕ್ಷ ಲಂಚ ಪಡೆಯುತ್ತಿದ್ದಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಅಗ್ನಿಶಾಮಕ ಅಧಿಕಾರಿರಾಜ್ಯದ 50 ಲಕ್ಷ ರೈತರಿಗೆ 2,500 ಇನ್‌ಪುಟ್ ಸಬ್ಸಿಡಿ: ಪರಮೇಶ್ವರ್ ಘೋಷಣೆಸಾವಿರಾರು ಮತದಾರರ ಹೆಸರು ತೆಗೆಯಲು ಅಭಯ್ ಪಾಟೀಲ್ ಪತ್ರ: ಬಂಧನಕ್ಕೆ ಹರಿಪ್ರಸಾದ್ ಆಗ್ರಹಲೋಕಾಯುಕ್ತರಿಂದ ಫೋನ್ ಪೇ ಪರಿಶೀಲನೆ, ಅಧಿಕಾರಿಗಳು ತಬ್ಬಿಬ್ಬುದ್ವಿಚಕ್ರ ವಾಹನಕ್ಕೆ ಸಿಮೆಂಟ್ ಲಾರಿ ಡಿಕ್ಕಿ – ವಿದ್ಯಾರ್ಥಿನಿ ದಾರುಣ ಸಾವುಪರಪ್ಪನ ಅಗ್ರಹಾರ ಜೈಲಿನ ವಾರ್ಡರ್‌ನಿಂದ ಹಲ್ಲೆ – ಡಾಬಾ ಮಾಲೀಕ ಸಾವುತಮಿಳುನಾಡಿಗೆ ಕಾವೇರಿ ನೀರು – ಸರ್ಕಾರದಿಂದ ನ್ಯಾಯಾಲಯದಲ್ಲಿ ಮೇಲ್ಮನವಿ: ಸಿಎಂ ಡಿಕೆಶಿಚೆನ್ನೈ – ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ; ಮೂವರು ದುರ್ಮರಣ