ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಿಂದ ದಾಟಿದ್ದ ಭಾರತೀಯ ಹಡಗುಗಳ ಮೇಲೆ ದಾಳಿ ನಡೆಸಿದ್ದು ಯಾರು ಎಂಬ ಪ್ರಶ್ನೆ ಈಗ ಎದ್ದಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿರುವ ಪೋಸ್ಟ್‌ನಿಂದ ಈ ಪ್ರಶ್ನೆ ಈಗ ಹುಟ್ಟಿಕೊಂಡಿದೆ.
ಇರಾನ್ ನಡೆಸಿದ ಡ್ರೋನ್ ದಾಳಿಯನ್ನು ಟ್ರಂಪ್ ತೀವ್ರವಾಗಿ ಖಂಡಿಸಿದ್ದು ಈ ದಾಳಿಯನ್ನು ಖಂಡಿತವಾಗಿಯೂ ಒಪ್ಪಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಹೋರ್ಮುಜ್ ಜಲಸಂಧಿಯಿಂದ ಹೊರಡುತ್ತಿದ್ದ ಭಾರತೀಯ ಹಡಗುಗಳ ಮೇಲೆ ಇರಾನ್ ನಿನ್ನೆ ರಾತ್ರಿ ನಡೆಸಿದ ಡ್ರೋನ್ ದಾಳಿಯನ್ನು ಸಂಪೂರ್ಣವಾಗಿ ತಡೆಯಲಾಗಿದೆ. ಇರಾನ್ ತಕ್ಷಣವೇ ತನ್ನ ಬುದ್ಧಿ ಕಲಿಯಬೇಕು, ಅದೂ ಬೇಗನೇ ಎಂದು ಎಚ್ಚರಿಕೆ ನೀಡಿದ್ದಾರೆ.
ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಶಾಂತಿ ಒಪ್ಪಂದದ ಬಗ್ಗೆ ಇರಾನ್ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ. ನಾವು ಲಿಖಿತವಾಗಿ ಒಪ್ಪಿಕೊಂಡಿರುವ ನಿಯಮಗಳಿಗೂ, ಇರಾನ್ ಮಾಧ್ಯಮಗಳಿಗೆ ಸೋರಿಕೆ ಮಾಡಿರುವ ನಿಯಮಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ
ಇರಾನ್ ಮಾಡಿರುವ ದುರ್ಬಲ ಹೇಳಿಕೆಗಳು ಸತ್ಯಕ್ಕೆ ದೂರವಾಗಿವೆ. ಇರಾನ್‌ನವರನ್ನು ಅಪ್ರಾಮಾಣಿಕ ಜನರು ಎಂದು ಕರೆದಿರುವ ಟ್ರಂಪ್ ಅವರೊಂದಿಗೆ ಪ್ರಾಮಾಣಿಕವಾಗಿ ವ್ಯವಹರಿಸಲು ಸಾಧ್ಯವೇ ಇಲ್ಲ ಎಂದು ಬರೆದಿದ್ದಾರೆ.



