LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯುವಕರ ಭವಿಷ್ಯ ಹಾಳು ಮಾಡಿದ್ದು ನೀವು: ಮೋದಿ ವಿರುದ್ಧ ರಾಗಾ ಆಕ್ರೋಶ

Advertisement
Advertisement

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ನಡುವೆ ಪ್ರಧಾನಿ ನರೇಂದ್ರ ಮೋದಿ (PM Modi) ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ದೇಶದ ಯುವಕರ ಭವಿಷ್ಯಕ್ಕೆ ದೊಡ್ಡ ಹಾನಿ ಮಾಡಿದ್ದು ಕೇಂದ್ರ ಸರ್ಕಾರವೇ ಎಂದು ಅವರು ಆರೋಪಿಸಿದ್ದಾರೆ.

ಪ್ರಧಾನಿ ಮೋದಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಖಚಿತಪಡಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ. ಯುವಕರ ಭವಿಷ್ಯ ಸರ್ಕಾರದ ಮೊದಲ ಆದ್ಯತೆ ಎಂದು ಭರವಸೆ ನೀಡಿದ್ದಾರೆ.

ಪ್ರಧಾನಿ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಯುವಕರ ಭವಿಷ್ಯಕ್ಕೆ ಹೆಚ್ಚು ಹಾನಿ ಮಾಡಿರುವುದು ನೀವೇ. ದೇಶದ ಶಿಕ್ಷಣ ವ್ಯವಸ್ಥೆಯನ್ನು ಹಾಳಾಗಲು ನೀವು ಅವಕಾಶ ನೀಡಿದ್ದೀರಿ. ಇದಕ್ಕೆ ಕಾರಣರಾದವರನ್ನೇ ರಕ್ಷಿಸಿದ್ದೀರಿ ಎಂದು ಸೋಷಿಯಲ್‌ ಮೀಡಿಯಾ X ನಲ್ಲಿ ಪೋಸ್ಟ್‌ ಮೂಲಕ ಆರೋಪಿಸಿದ್ದಾರೆ.

ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಈ ಕೆಳಗಿನ ಮೂರು ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ವಿದ್ಯಾರ್ಥಿಗಳಲ್ಲಿ ಅಧಿಕೃತವಾಗಿ ಕ್ಷಮೆ ಕೇಳಬೇಕು ಎಂಬುದು ಮತ್ತೊಂದು ಪ್ರಮುಖ ಬೇಡಿಕೆಯಾಗಿದೆ.

ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ದುರ್ಬಲಗೊಳಿಸಲಾಗಿದೆ ಎಂದು ಆರೋಪಿಸಿದ ಅವರು, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ವಿದ್ಯಾರ್ಥಿನಿಯರ ಅದ್ವಿತೀಯ ಸಾಧನೆಮೋದಿಯನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ಯುವಕ ಪೊಲೀಸ್ ವಶಕ್ಕೆಯುವಕರ ಭವಿಷ್ಯ ಹಾಳು ಮಾಡಿದ್ದು ನೀವು: ಮೋದಿ ವಿರುದ್ಧ ರಾಗಾ ಆಕ್ರೋಶಬಿಜೆಪಿ ಶಾಸಕರ ಮೇಲೆ ಮೊಟ್ಟೆ ಎಸೆತ – ಆರೋಪಿ ಪುಣ್ಯೇಶ್ ಬಂಧನಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಬರ್ತ್‌ಡೇ ದಿನವೇ ಹತ್ಯೆಗೆ ಒಳಗಾದವನ ಕೊಲೆ ರಹಸ್ಯ ಬಯಲು – ಊಟಕ್ಕೆ ಹಣ ಕೊಡಲಿಲ್ಲವೆಂದು ಜೊತೆಯಲ್ಲಿದ್ದವನಿಂದಲೇ ಕೃತ್ಯದೆಹಲಿ ವಿದ್ಯಾರ್ಥಿಗಳ ಪರ ನಿಂತ ಆಲಿಯಾ ಭಟ್ಪ್ರಶ್ನೆ ಪತ್ರಿಕೆ ಸೋರಿಕೆ; ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿ ಕೆ ಶಿವಕುಮಾರ್ ಆಗ್ರಹನಾವು ಪ್ರತಿಷ್ಠೆಗೆ ಬಿದ್ದಿಲ್ಲ, ಮಾತುಕತೆಗೆ ಬನ್ನಿ – ಸಿಜೆಪಿ ಜೊತೆ ಸಭೆಗೆ ಕೇಂದ್ರದಿಂದ 4ನೇ ಆಹ್ವಾನಅನಂತನಾಗ್‌ನಲ್ಲಿ ಬಾಲ ಬಿಚ್ಚಿದ ಉಗ್ರರು – ಇಬ್ಬರ ಮನೆ ಧ್ವಂಸಗೊಳಿಸಿದ ಸೇನೆ