ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಶನಿವಾರ) ಬೆಂಗಳೂರಿನಲ್ಲಿ ದಕ್ಷಿಣ ವಲಯದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಪುದುಚೇರಿಯ ಕೇಂದ್ರಾಡಳಿತ ಪ್ರದೇಶಗಳ ಆರ್‌ಆರ್‌ಬಿಗಳ ಕಾರ್ಯಕ್ಷಮತೆಯನ್ನು ನಿರ್ಮಲಾ ಸೀತಾರಾಮನ್ ಪರಿಶೀಲಿಸಿದ್ದಾರೆ.
ಇಂದು ನಡೆದ ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಹಣಕಾಸು ಸೇವೆಗಳ ಇಲಾಖೆ (ಡಿಎಫ್‌ಎಸ್) ಕಾರ್ಯದರ್ಶಿ, ಡಿಎಫ್‌ಎಸ್‌ನ ಹಿರಿಯ ಅಧಿಕಾರಿಗಳು, ರಾಜ್ಯ ಸರ್ಕಾರಗಳ ಅಧಿಕಾರಿಗಳು, ಎಸ್‌ಐಡಿಬಿಐ, ನಬಾರ್ಡ್ ಪ್ರತಿನಿಧಿಗಳು, ಆರ್‌ಆರ್‌ಬಿಗಳ ಮಧ್ಯಸ್ಥಗಾರರು ಮತ್ತು ಪ್ರಾಯೋಜಕ ಬ್ಯಾಂಕ್‌ಗಳು ಭಾಗವಹಿಸಿದ್ದರು.
ಗ್ರಾಮೀಣ ಆರ್ಥಿಕತೆಯನ್ನು ಬೆಂಬಲಿಸುವಲ್ಲಿ ಅವರ ನಿರ್ಣಾಯಕ ಪಾತ್ರದಿಂದಾಗಿ ದೇಶದಾದ್ಯಂತ ಆರ್ಆರ್ಬಿಗಳ ಕಾರ್ಯಕ್ಷಮತೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪರಿಶೀಲಿಸಿದ್ದಾರೆ ಎಂದು ಹಣಕಾಸು ಸಚಿವಾಲಯ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.