ನವದೆಹಲಿ : ಹಿಜಾಬ್ ವಿವಾದದ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ, ಈಗಾಗಲೇ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ದರಿಸಬಾರದು ಅಂತಾ ಹೈಕೋರ್ಟ್ ತೀರ್ಪು ನೀಡಿದೆ. ಆದ್ರೆ ನಿನ್ನೆ ವಿದ್ಯಾರ್ಥಿನಿಯರು ತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ .
ಈ ಬಗ್ಗೆ ಪ್ರತಿಕ್ರಿಯೆಸಿರುವ ಸುಪ್ರೀಂಕೋರ್ಟ್, ಆದೇಶದ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದೆ. ಹೋಳಿ ಹಬ್ಬದ ರಜೆಯ ನಂತರ ವಿಚಾರಣೆ ನಡೆಸುತ್ತೇವೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ತುರ್ತು ವಿಚಾರಣೆ ನಡೆಸುವಂತೆ ಅರ್ಜಿದಾರರು ಕೋರಿದ್ದರು. ಸೋಮವಾರವೇ ತುರ್ತು ವಿಚಾರಣೆ ಮನವಿಯನ್ನು ಸಿಜಿಐ ಎನ್.ವಿ. ರಮಣ ತಿರಸ್ಕರಿಸಿದ್ದಾರೆ. ಅಷ್ಟೇ ಅಲ್ಲದೇ ತುರ್ತು ವಿಚಾರಣೆ ನಡೆಸುವ ಅಗತ್ಯವೆನಿದೆ ಪ್ರಶ್ನಿಸಿದ್ದಾರೆ.