spot_img
spot_img
spot_img
36.1 C
Belagavi
Tuesday, June 6, 2023
spot_img

ಕರ್ನಾಟಕದ ಯಾವುದೇ ಭಾಗ ಮಹಾರಾಷ್ಟ್ರಕ್ಕೆ ಹೋಗಲ್ಲ : ಬೊಮ್ಮಾಯಿ

ದಾವಣಗೆರೆ: ನಮಗೆ ಸಂಪೂರ್ಣ ವಿಶ್ವಾಸ ಇದೆ, ರಾಜ್ಯದ ಯಾವುದೇ ಭಾಗ ಮಹಾರಾಷ್ಟ್ರಕ್ಕೆ ಹೋಗಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆ ನಗರದಲ್ಲಿ ಮಹಾರಾಷ್ಟ್ರ ಗಡಿ ಕ್ಯಾತೆ ಕುರಿತು ಪ್ರತಿಕ್ರಿಯಿಸಿದ ಅವರು, ಸ್ಟೇಟ್ ರಿ-ಆರ್ಗನೈಸೇಷನ್ ವಿಚಾರದಲ್ಲಿ ಆರ್ಟಿಕಲ್ಸ್ 3 ಅಡಿಯಲ್ಲಿ ಮಹಾರಾಷ್ಟ್ರ ನ್ಯಾಯಾಲಯದಲ್ಲಿ ದಾವೆ ಹೂಡಿದೆ.

ಅವರು ಹೂಡಿರುವ ದಾವೆ ನ್ಯಾಯ ಸಮ್ಮತವಲ್ಲ, ಅನ್ನೋದನ್ನ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುತ್ತೇವೆ. ನಮಗೆ ಸಂಪೂರ್ಣ ವಿಶ್ವಾಸ ಇದೆ, ಕರ್ನಾಟಕದ ಯಾವುದೇ ಭಾಗ ಮಹಾರಾಷ್ಟ್ರಕ್ಕೆ ಹೋಗಲ್ಲ. ಕರ್ನಾಟಕದ ಯಾವುದೇ ಪ್ರದೇಶ ಬದಲಾಗಲ್ಲ. ಅವರದ್ದು ಬೇರೆ ಬೇರೆ ಡಿಮ್ಯಾಂಡ್ ಇದೆ. ಮುಂದಿ‌ನ ವಾರ ಸರ್ವ ಪಕ್ಷಗಳ ಹಾಗೂ ಕಾನೂನು ತಜ್ಞರ ಸಭೆ ನಡೆಸಲಿದ್ದೇವೆ ಎಂದು ತಿಳಿಸಿದರು.

ಇನ್ನು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಮೇಲೆ ನಮಗೆ ಅಪಾರವಾದ ಗೌರವ ಇದೆ. ಅವರು ಹಿರಿಯರು, ಶರದ್ ಪವಾರ್ ಬಹಳ ವರ್ಷಗಳಿಂದ ಕರ್ನಾಟಕ ಮಹರಾಷ್ಟ್ರ ಗಡಿ ವಿಚಾರದಲ್ಲಿ ರಾಜಕೀಯ ಮಾಡಿದ್ದಾರೆ.

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿಸಬೇಕು ಅಂತ ಕನಸು ಕಾಣುತ್ತಿದ್ದಾರೆ. ಮಹಾರಾಷ್ಟ್ರಕ್ಕೆ ಬೆಳಗಾವಿ ಸೇರಿಸುವ ಕನಸು ನನಸಾಗೋದಿಲ್ಲ ಎನ್ನುವ ಮೂಲಕ ಎನ್​ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಖಡಕ್​ ಸಂದೇಶ ರವಾನಿಸಿದ್ದರು.

Related News

ಅಂತೆ ಕಂತೆಗಳಿಗೆ ಕಿವಿಗೊಡಬೇಡಿ, ಸರಕಾರ ನಿಮ್ಮ ಜೊತೆಗಿದೆ – ಜನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ

ಬೆಳಗಾವಿ: ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು...

ಪ್ರಿಯತಮೆಯನ್ನು ಕೊಲೆ ಮಾಡಿ ಎಸ್ಕೇಪ್ ಆದ ಪ್ರಿಯಕರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಎಸ್ಕೇಪ್ ಆದ ಘಟನೆ ನಡೆದಿದೆ. ಬೆಂಗಳೂರಿನ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ಮೂಲದ ಆಕಾಂಕ್ಷಾ ಮೃತ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -