spot_img
spot_img
spot_img
18.2 C
Belagavi
Monday, September 26, 2022
spot_img

ವಿಧಾನ ಪರಿಷತ್ ಚುನಾವಣೆ : ಮೂರು ಪಕ್ಷಗಳಿಂದ 7 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ 

spot_img
spot_img

For Breaking News Download App

ಬೆಂಗಳೂರು: ಜೂನ್ 3ರಂದು ನಡೆಯುವ ವಿಧಾನ ಪರಿಷತ್ ನ 7 ಸ್ಥಾನಗಳ ಚುನಾವಣೆಗೆ ಮೂರು (ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್) ಪಕ್ಷಗಳಿಂದ ಒಟ್ಟು 7 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯದಿನವಾಗಿದ್ದರಿಂದ ಮೂರು ಪಕ್ಷಗಳ ಅಭ್ಯರ್ಥಿಗಳು ತರಾತುರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಒಟ್ಟು 7 ಸ್ಥಾನಗಳಿಗೆ ನಡೆಯುವ ಚುನಾವಣೆಗೆ 7 ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅವಿರೋಧ ಆಯ್ಕೆ ನಿಚ್ಚಳವಾಗಿದೆ.

ಬಿಜೆಪಿಯಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಹಾಗೂ ಹೇಮಲತಾ ನಾಯಕ್ ಅವರು ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ಕಾಂಗ್ರೆಸ್‌ನಿಂದ ವಿಧಾನ ಪರಿಷತ್ ನ ಮಾಜಿ ಸದಸ್ಯ ಅಬ್ದುಲ್ ಜಬ್ಬಾರ್ ಹಾಗೂ ನಾಗರಾಜ ಯಾದವ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ಜೆಡಿಎಸ್‌ನಿಂದ ಟಿ.ಎ. ಶರವಣ ನಾಮಪತ್ರ ಸಲ್ಲಿಸಿದ್ದಾರೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -