Ad imageAd image

ಗ್ಯಾರಂಟಿಗಳಿಗೆ ಹಣವಿಲ್ಲದೆ 60 ಲಕ್ಷ ರೇಷನ್​ ಕಾರ್ಡ್​​ ರದ್ದುಪಡಿಸಲು ಹೊರಟ ಸರ್ಕಾರ: ಆರ್ ಅಶೋಕ್ ವಾಗ್ದಾಳಿ

ratnakar
ಗ್ಯಾರಂಟಿಗಳಿಗೆ ಹಣವಿಲ್ಲದೆ 60 ಲಕ್ಷ ರೇಷನ್​ ಕಾರ್ಡ್​​ ರದ್ದುಪಡಿಸಲು ಹೊರಟ ಸರ್ಕಾರ: ಆರ್ ಅಶೋಕ್ ವಾಗ್ದಾಳಿ
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕದಲ್ಲಿ 60 ಲಕ್ಷ ರೇಷನ್​ ಕಾರ್ಡ್​​ ರದ್ದುಪಡಿಸಲು ಕಾಂಗ್ರೆಸ್ ಸರ್ಕಾರ ಹೊರಟಿದೆ. 5 ಗ್ಯಾರಂಟಿಗಳಿಗೆ ಕೊಡಲು ಇವರ ಬಳಿ ಹಣವಿಲ್ಲ ಎಂದು ಪ್ರತಿಕ್ಷ ನಾಯಕ ಆರ್ ಅಶೋಕ್ ಟೀಕಿಸಿದರು. ದೆಹಲಿಗೆ ತೆರಳುವ ಮುನ್ನ ವಿಮಾನ ನಿಲ್ದಾಣದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಮ್ಮ ರೇಷನ್ ಕಾರ್ಡ್ ಕಿತ್ತುಕೊಳ್ಳುತ್ತಿದ್ದಾರೆಂದು ಬಡ ಜನರು ಆತಂಕಕ್ಕೀಡಾಗಿದ್ದಾರೆ. ಈ ವಿಚಾರದಲ್ಲಿ ಎಲ್ಲೆಡೆ ಗೊಂದಲ ಸೃಷ್ಟಿಯಾಗಿದೆ ಎಂದರು.

ಗ್ಯಾರಂಟಿಗಳಿಗೆ ಕೊಡಲು ಹಣವಿಲ್ಲ. ಹೀಗಾಗಿ ರೇಷನ್ ಕಾರ್ಡ್ ಕಿತ್ತರೆ ಮೂರು ನಾಲ್ಕು ಸಾವಿರ ಕೋಟಿ ರೂಪಾಯಿ ಹಣ ಸಿಗುತ್ತದೆ ಎಂದು ಅಂತ ಅದಕ್ಕೆ ಕೈ ಹಾಕಿದ್ದಾರೆ. ಸರ್ಕಾರದ ಆಡಳಿತ ಯಂತ್ರ ಪೂರ್ತಿ ಐಸಿಯುನಲ್ಲಿರುವಂತೆ ಕಾಣುತ್ತಿದೆ ಎಂದು ಅಶೋಕ್ ಹೇಳಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉದ್ಯಮಸ್ನೇಹಿ ವಾತಾವರಣವನ್ನು ಹಾಳು ಮಾಡಿದೆ ಎಂದು ಬಿಜೆಪಿ ಟೀಕಿಸಿದೆ. ಕಾಂಗ್ರೆಸ್ ಸರ್ಕಾರದ ನೀತಿಗಳು ಹಾಗೂ ಅಸಮರ್ಪಕ ಆಡಳಿತದಿಂದ ಅನೇಕ ಉದ್ಯಮಗಳು ರಾಜ್ಯ ತೊರೆದು ಬೇರೆ ಕಡೆ ಹೋಗುತ್ತಿವೆ ಎಂದೂ ಬಿಜೆಪಿ ಎಕ್ಸ್ ಸಂದೇಶದ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

 

WhatsApp Group Join Now
Telegram Group Join Now
Share This Article