spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಬಸವ, ಗಾಂಧಿ, ಅಂಬೇಡ್ಕರ್ ತತ್ವದಡಿ ಸರ್ಕಾರದ ಕಾರ್ಯನಿರ್ವಹಣೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಚಾಮರಾಜನಗರ: ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಸರ್ಕಾರ ರಚನೆಯಾದ 100 ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಬಸವ, ಗಾಂಧಿ, ಅಂಬೇಡ್ಕರ್ ತತ್ವದಡಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಜಿಲ್ಲಾ ಆಡಳಿತ ಭವನ ಆವರಣದಲ್ಲಿರುವ ವರನಟ ಡಾ‌.ರಾಜ್ ಕುಮಾರ್ ರಂಗಮಂದಿರದಲ್ಲಿ ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಬುಧವಾರ (ಆಗಸ್ಟ್30) ಏಕಕಾಲದಲ್ಲಿ ರಾಜ್ಯದ 13 ಸಾವಿರ ಕಡೆ ಯೋಜನೆಗೆ ಚಾಲನೆ ಸಿಗಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾರಥ್ಯದಲ್ಲಿ ರಾಜ್ಯ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ನಮ್ಮ ಇಲಾಖೆಯಲ್ಲಿ ಸಾಕಷ್ಟು ಕೆಲಸಗಳಿವೆ. ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕ ಬಳಿಕ ಇಲಾಖೆಯ ಕೆಲಸ ಕಾರ್ಯಗಳಿಗೆ ವೇಗ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಬುಧವಾರ ನಡೆಯಲಿರುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಇದಕ್ಕೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹೆಚ್ಚಿನ ಪಾತ್ರ ವಹಿಸಬೇಕು ಎಂದರು.
ಚಾಮರಾಜನಗರದಲ್ಲಿ ಅತಿಹೆಚ್ಚು ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಸಾಕಷ್ಟಿದೆ ಎಂದು ಸಚಿವರು ಹೇಳಿದರು.

ಈ ವೇಳೆ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -