spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಹೊಸ ಬಡಾವಣೆ ನಿರ್ಮಾಣ; ನಿಯಮಾವಳಿ ಪಾಲನೆಗೆ ಸಚಿವ ಸತೀಶ್ ಜಾರಕಿಹೊಳಿ ಕಟ್ಟುನಿಟ್ಟಿನ ಸೂಚನೆ

ಬೆಳಗಾವಿ: ಬುಡಾ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳಲಿರುವ ಹೊಸ ಬಡಾವಣೆಗಳಲ್ಲಿ ಉದ್ಯಾನ, ರಸ್ತೆ, ಒಳಚರಂಡಿ, ನಾಗರಿಕ ಸೌಲಭ್ಯ ನಿವೇಶನ ಮತ್ತಿತರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಈ ಬಗ್ಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಲೋಕೊಪಯೋಗಿ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.

ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಸೆ.5) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಿಯಮಬಾಹಿರವಾಗಿರುವ ಬಡಾವಣೆಗಳಿಗೆ ಅನುಮತಿ ನೀಡಬಾರದು. ಈ ಬಗ್ಗೆ ಅಧಿಕಾರಿಗಳು ಸೂಕ್ತ ಪರಿಶೀಲನೆ ಕೈಗೊಂಡ ಬಳಿಕವೇ ಪ್ರಾಧಿಕಾರದಿಂದ ಅನುಮೋದನೆ ನೀಡಬೇಕು ಎಂದು ಹೇಳಿದರು.

ಬೆಳಗಾವಿ ನಗರದ ಮಹಾಯೋಜನೆ ಪರಿಷ್ಕೃತ -3 ನ್ನು ಹಾಲಿ ಸ್ಥಳೀಯ ಯೋಜನಾ ಪ್ರದೇಶ ಹಾಗೂ ಹೆಚ್ಚುವರಿಯಾಗಿ 28 ಗ್ರಾಮಗಳನ್ನು ಸೇರಿಸಿ ಹಾಲಿ ಸ್ಥಳೀಯ ಯೋಜನಾ ಪ್ರದೇಶ ಘೋಷಿಸಿರುವ ಗ್ರಾಮ/ಪಟ್ಟಣಗಳಿಗೆ ಜಿಐಎಸ್ ಆಧಾರಿತ ಅಮೃತ ಟಿ.ಆರ್.ಓ. ಅನ್ವಯ ಮಹಾಯೋಜನೆ ತಯಾರಿಸಲು ಅನುಮೋದನೆಗೆ ಒಪ್ಪಿಗೆ ನೀಡಲಾಯಿತು.
ಕೆಲವೆಡೆ ಎರಡು ಗ್ರಾಮಗಳ ನಡುವಿನ ಗ್ರಾಮ ಬಿಟ್ಟು ಹೋಗಿದ್ದು, ಅವುಗಳನ್ನು ಹೆಚ್ಚುವರಿ ಸೇರ್ಪಡೆಗೆ ಕ್ರಮ ಕೈಗೊಳ್ಳಬೇಕು ಎಂದರು.

ನಿವೇಶನಗಳ ದರ ನಿಗದಿ ಹಾಗೂ ಹಂಚಿಕೆ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಇದಲ್ಲದೇ ಇ-ಹರಾಜು ಹಾಗೂ ಮ್ಯಾನ್ಯುವಲ್ ಹರಾಜು ಪ್ರಕ್ರಿಯೆ ಸಂದರ್ಭದಲ್ಲಿ ಪಾಲಿಸಲಾದ ನಿಯಮಗಳ ಬಗ್ಗೆ ಚರ್ಚಿಸಿದರು.

ಇ-ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿಗದಿಪಡಿಸಲಾಗಿರುವ ಇ‌ಎಂಡಿ ಹೆಚ್ಚಿಸುವ ಬಗ್ಗೆ ಕೈಗೊಂಡ ನಿರ್ಣಯವನ್ನು ಅಂಗೀಕರಿಸಬಹುದು ಎಂದು ಸಚಿವರು ಹೇಳಿದರು.

ಕ್ರೀಡಾಂಗಣಕ್ಕೆ ಜಾಗೆ ಗುರುತಿಸಲು ನಿರ್ದೇಶನ:

ನಗರದಲ್ಲಿ ವಿಶಾಲವಾದ ಜಿಲ್ಲಾ ಕ್ರೀಡಾಂಗಣಕ್ಕೆ ಅಗತ್ಯವಾದ ಜಮೀನು ಗುರುತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ತಿಳಿಸಿದರು.

ಎಲ್ಲ ರೀತಿಯಲ್ಲಿ ಅನುಕೂಲವಾಗುವಂತಹ ಜಾಗೆಯಲ್ಲಿ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದರು.

ಮಾಸ್ಟರ್ ಪ್ಲ್ಯಾನ್ ಅವಧಿ ಮುಗಿದಿದ್ದು, ಪರಿಷ್ಕೃತ ಪ್ಲ್ಯಾನ್ ಜಾರಿಗೆ ಬರುವವರೆಗೆ ಹಳೆಯ ಪ್ಲ್ಯಾನ್ ಮುಂದುವರಿಸಲು ಅನುಮೋದನೆ ನೀಡಬೇಕಿದೆ ಎಂದು ಬುಡಾ ಆಯುಕ್ತ ಷಕೀಲ್ ಅಹ್ಮದ್ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಹೊಸ ಬಡಾವಣೆಗಳನ್ನು ನಿಯಮಾವಳಿ ಪ್ರಕಾರ ನಿರ್ಮಿಸಿರುವ ಬಗ್ಗೆ ಸಮರ್ಪಕ ಪರಿಶೀಲನೆ ನಡೆಸಲಾಗುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು.

ಅನುಮತಿ ಪಡೆದುಕೊಂಡ ಹೊಸ ಬಡಾವಣೆಗಳಲ್ಲಿ ನಿಯಮಾವಳಿ ಪಾಲಿಸಿರುವುದನ್ನು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು ಎಂದು ತಿಳಿಸಿದರು.
ಉದ್ಯಾನ, ಯುಜಿಡಿ, ವಿದ್ಯುತ್ ಸಂಪರ್ಕ, ರಸ್ತೆ ಮತ್ತಿತರ ಅಭಿವೃದ್ಧಿ ಸಂಪೂರ್ಣಗೊಂಡಿರುವ ಬಡಾವಣೆಗಳಿಗೆ ಮಾತ್ರ ಅನುಮತಿ ನೀಡಬೇಕು ಎಂದರು.

ಒಂದು‌ ಲಕ್ಷ ಜನರನ್ನು ಸೇರಿಸಬಹುದಾದಷ್ಟು ವಿಶಾಲವಾದ ಜಿಲ್ಲಾ ಕ್ರೀಡಾಂಗಣ ನಿರ್ಮಿಸುವ ಅಗತ್ಯವಿದೆ. ಇದಕ್ಕೆ ಅಗತ್ಯವಾದ ಜಮೀನನ್ನು ಗುರುತಿಸಬೇಕು ಎಂದು ಸಚಿವರ ಹೆಬ್ಬಾಳಕರ್ ಹೇಳಿದರು.

ಆಯಾ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಳ್ಳಲಾಗುವ ಯೋಜನೆಗಳು ಹಾಗೂ ಮಂಜೂರಾತಿ ಕುರಿತು ಸಂಬಂಧಿಸಿದ ಶಾಸಕರ ಗಮನಕ್ಕೆ ತಂದು ನಿರ್ಣಯ ಕೈಗೊಳ್ಳಬೇಕು ಎಂದು ಶಾಸಕ ಅಭಯ್ ಪಾಟೀಲ ಹೇಳಿದರು.
ಈಗಾಗಲೇ ನಿರ್ಮಾಣಗೊಂಡಿರುವ ಬಡಾವಣೆಗಳು ನಿಯಮಾವಳಿ ಪಾಲಿಸಿರುವ ಬಗ್ಗೆ ಸಮಗ್ರ ಸಮೀಕ್ಷೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಶಾಸಕ ಆಸಿಫ್(ರಾಜು ಸೇಠ್) ಅವರು, ಬಡಾವಣೆ ಅಭಿವೃದ್ಧಿ ಮತ್ತು ಸಮರ್ಪಕ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಹಾಗೂ ಬುಡಾ ಆಡಳಿತಾಧಿಕಾರಿ ನಿತೇಶ್ ಪಾಟೀಲ ಅವರು, ಕಣಬರ್ಗಿ ಬಡಾವಣೆ ಅಭಿವೃದ್ಧಿಗೆ 87 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ.
ಇತರೆ ಅಭಿವೃದ್ಧಿ ಕೆಲಸಕ್ಜೆ 9 ಕೋಟಿ ರೂಪಾಯಿ ಲಭ್ಯವಿದ್ದು, ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿ ಹೊರತುಪಡಿಸಿ ಇತರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬಹುದು ಎಂದರು.
ಕೆರೆಯ ಸುತ್ತಮುತ್ತಲಿನ ಜಾಗೆಗಳ ಅತಿಕ್ರಮಣ ಪರಿಶೀಲಿಸಿ ವರದಿ ಸಲ್ಲಿಸುವಂತೆ ತಿಳಿಸಿದರು.

ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆ:

ಇದಾದ ಬಳಿಕ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ನ ಮ್ಯಾನೇಜಿಂಗ್ ಕಮಿಟಿ ಮತ್ತು ಆಡಳಿತ ಸಮಿತಿಯ ಸಭೆ ನಡೆಯಿತು.

7.85 ಕೋಟಿ ರೂಪಾಯಿ ಅನುದಾನ ಲಭ್ಯವಿದ್ದು, ಇದಕ್ಕಾಗಿ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿವರಿಸಿದರು.

ಸದರಿ ಪ್ರಸ್ತಾವನೆ ಹಾಗೂ ಅನುದಾನದ ಸಮರ್ಪಕ ಹಂಚಿಕೆ ಕುರಿತು ಮುಂದಿನ ಸಭೆಯಲ್ಲಿ ವಿಸ್ತೃತವಾದ ವರದಿ ಮಂಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.
ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಶಾಸಕ ಆಸೀಫ್ ಸೇಠ್, ಖಾನಾಪುರ ಶಾಸಕ ವಿಠ್ಠಲ ಹಲಗೇಕರ್, ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ಸೇರಿದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ಬಳಿಕ ವಾರ್ತಾ ಇಲಾಖೆಯ ನೂತನ ವಾಹನದಲ್ಲಿ ತೆರಳಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕಾಗಿ ಅಶೋಕ ನಗರದ ಕ್ರೀಡಾ ಸಂಕೀರ್ಣ ಬಳಿಯ ಜಾಗೆಯನ್ನು ಪರಿಶೀಲಿಸಿದರು.
ಶಾಸಕ ಆಸೀಫ್ ಸೇಠ್ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಜಾಗೆ ಲಭ್ಯತೆ ಕುರಿತು ಮಾಹಿತಿಯನ್ನು ನೀಡಿದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -