ಹಿರಿಯ ಪತ್ರಕರ್ತ ಎಂ ಕೆ ಹೆಗಡೆ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಪತ್ರಿಕಾರಂಗದಲ್ಲಿ 28 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಇವರು ನಾಡಿನ ಹೆಸರಾಂತ ಪತ್ರಿಕೆಗಳಾದ ಕನ್ನಡಪ್ರಭ, ವಿಜಯವಾಣಿ ,
ವಿಜಯ ಕರ್ನಾಟಕ, ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ
ಸಕ್ರಿಯ ರಾಗಿರುವ ಇವರು ಪ್ರಗತಿ ವಾಹಿನಿ ಸುದ್ದಿ ಸಂಸ್ಥೆ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಮೂಲತ ಶಿರಸಿ ತಾಲೂಕಿನ ಹೆಗಡೆಕಟ್ ಕಲ್ಮನಿ ಮೂಲದವರಾಗಿದ್ದಾರೆ.
ಇವರು ಈಗ ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ, ಇವರ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ ವಿಶೇಷಾಧಿಕಾರಿ ಮತ್ತು ಮಾಧ್ಯಮ ಸಲಹೆಗಾರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.