Ad imageAd image

ರೇಣುಕಾಸ್ವಾಮಿ ಕೊಲೆ ಕೇಸ್‌ – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ.ದಯಾನಂದ್‌

ratnakar
ರೇಣುಕಾಸ್ವಾಮಿ ಕೊಲೆ ಕೇಸ್‌ – ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ಗೆ ವರ್ಗಾಯಿಸಲು ಚಿಂತನೆ: ಬಿ.ದಯಾನಂದ್‌
WhatsApp Group Join Now
Telegram Group Join Now

ಬೆಂಗಳೂರು: ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು (Renukaswamy Case) ಫಾಸ್ಟ್‌ ಟ್ರ್ಯಾಕ್‌ ಕೋರ್ಟ್‌ ಅಥವಾ ಸ್ಪೆಷಲ್ ಕೋರ್ಟ್‌ಗೆ ಮನವಿ ಚಿಂತನೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ (Bengaluru Police Commissioner) ಬಿ.ದಯಾನಂದ್‌ ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ. ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಅಥವಾ ಸ್ಪೆಷಲ್ ಕೋರ್ಟ್‌ಗೆ (Speical Court) ಮನವಿ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಬಹುಪಾಲು ರಿಪೋರ್ಟ್‌ಗಳು ಚಾರ್ಜ್‌ಶೀಟ್‌ ಸಲ್ಲಿಕೆಗೂ ಮುನ್ನವೇ ನಮ್ಮ ಕೈಸೇರಿದೆ. ಮತ್ತಷ್ಟು ರಿಪೋರ್ಟ್‌ ಬರಬೇಕಿದೆ, ಆ ಬಳಿಕ ಕೋರ್ಟ್‌ಗೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ವಿಚಾರಕ್ಕೆ ಪ್ರತಿಕ್ರಿಯಿ, ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಸಿಸಿಬಿ ಜಂಟಿ ಪೊಲೀಸ್ ಡಾ.ಚಂದ್ರಗುಪ್ತ ನೇತೃತ್ವದಲ್ಲಿ ಅಧಿಕಾರಿಗಳ ಪಾತ್ರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನೂ ನಟ ಧ್ರುವ ಸರ್ಜಾ ಮ್ಯಾನೇಜರ್ ಬಂಧನ ಪ್ರಕರಣದ ಕುರಿತು ಮಾತನಾಡಿ, ಧ್ರುವ ಸರ್ಜಾಗೆ ಹತ್ತಿರವಾಗುವ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಹಾಗಾಗಿ ಸರ್ಜಾ ಮ್ಯಾನೇಜರ್ ಅಶ್ವಿನ್‌ನನ್ನ ಬಂಧನ ಮಾಡಲಾಗಿತ್ತು. ಬನಶಂಕರಿ ಪೊಲೀಸರು ಬಂಧನ ಮಾಡಿದ್ದರು ಅಷ್ಟೇ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article