ಬಾಗಲಕೋಟೆ:ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಬಸವೇಶ್ವರ ಪದವಿ ಪೂರ್ವ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಬಿಳಗಿ ತಾಲೂಕಿನ ಗಲಗಲಿಯ ಶ್ರೀ ಗಾಲವ ಶಿಕ್ಷಣ ಸಂಸ್ಥೆಯ ನ್ಯೂ ಇಂಗ್ಲೀಷ್ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಕ್ರೀಡಾಕೂಟದಲ್ಲಿ ಪುರುಷರ ವಾಲಿಬಾಲ್, ಥ್ರೋಬಾಲ್, 2೦೦ ಮೀಟರ್ ರನ್ನಿಂಗ್ ಮತ್ತು ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದರೆ ಇನ್ನೂ 15೦೦ ಮೀಟರ್ ರನ್ನಿಂಗ್, 110 ಮೀ ಹಡಲ್ಸ್ನಲ್ಲಿ ದ್ವೀತಿಯ ಸ್ಥಾನವನ್ನು ಪಡೆಯುವ ಮೂಲಕ ಒಟ್ಟು ಮೂವತ್ತಾö್ನಲ್ಕು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷರಾದ ವೀರಣ್ಣ ಚರಂತಿಮಠ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಧ್ಯಕ್ಷರಾದ ಗುರುಬಸವ ಸೂಳಿಭಾವಿ ಪ್ರಾಚಾರ್ಯರಾದ ಎಸ್ ಆರ್ ಮುಗನೂರಮಠ ದೈಹಿಕ ನಿರ್ದೇಶಕರಾದ ಮಂಜುನಾಥ ದೇವನಾಳ ಸೇರಿದಂತೆ ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.