ನವದೆಹಲಿ: ಚುನಾವಣೆ ಅಂಚಿನಲ್ಲಿರುವ ಕರ್ನಾಟಕಕ್ಕೆ ಕೇಂದ್ರದ ಬಜೆಟ್ ಮಂಡಣೆಯಲ್ಲಿ ಸಾಲು ಸಾಲು ಸಿಹಿಸುದ್ದಿಗಳು ಸಿಕ್ಕಿದ್ದು ನೀರಾವರಿ ಅಭಿವೃದ್ಧಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭರ್ಜರಿ ಕೊಡುಗೆ ನೀಡಿದ್ದಾರೆ.
ಬುದುವಾರ ಮಂಡಣೆಯಾದ ಕೇಂದ್ರದ ಬಜೆಟ್ ಚುನಾವಣೆ ಪೂರ್ವ ಮತ್ತು ಅಂತಿಮ ಬಜೆಟ್ ಆಗಿರುವುದರಿಂದ ಹಲವು ನಿರೀಕ್ಷೆಗಳಿಗೆ ಕಾರಣವಾಗಿತ್ತು ಅದರಂತೆಯೆ ಕರ್ನಾಟಕದ ಮಹತ್ವದ ಭದ್ರಾ ಮೇಲ್ಡಂಡೆ ಯೋಜನೆಗೆ” 5,300 ಕೋಟಿ ರೂಪಾಯಿ ನೆರವು ನೀಡುವುದಾಗಿ ಕೇಂದ್ರ ಘೋಷಿಸಿದೆ.
ಭದ್ರಾ ಮೇಲ್ದಂಡೆ ಯೋಜನೆಯಲ್ಲಿ 29.90 ಟಿಎಂಸಿ ಅಡಿ ನೀರಿನ ಬಳಕೆಯೊಂದಿಗೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಗಳ 5,57,022 ಎಕರೆ ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಮತ್ತು ಇದೇ ಜಿಲ್ಲೆಗಳ 367 ಸಣ್ಣ ನೀರಾವರಿ ಕೆರೆಗಳನ್ನು ಅವುಗಳ ಸಾಮರ್ಥ್ಯದ ಶೇ.50ರಷ್ಟು ತುಂಬಿಸಲು ಉದ್ದೇಶಿಸಲಾಗಿತ್ತು.
ಈ ಯೋಜನೆಗೆ ಒಟ್ಟು 21,473.67 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಎರಡು ಹಂತದಲ್ಲಿ ಈ ಯೋಜನೆಯನ್ನು ಕೈಗೊಳ್ಳಲು ನಿರ್ಧರಿಸಲಾಗಿತ್ತು. ಇದೀಗ ಭದ್ರಾ ಮೇಲ್ಡಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಪರಿಗಣಿಸಲ್ಪಟ್ಟಿದ್ದರಿಂದ ಕೇಂದ್ರ ಸರ್ಕಾರ 5,300 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದೆ.
ದಾರವಾಡ ಕಸೂತಿ ಸೀರೆಯಲ್ಲಿ ಮಿಂಚಿದ ವಿತ್ತ ಸಚಿವೆ:
ಧಾರವಾಡ ಜಿಲ್ಲೆಯ ನವಲಗುಂದ ಕಸೂತಿ ಕಲೆಯಲ್ಲಿ ಮೊದಲಿನಿಂದಲು ಹೆಸರುವಾಸಿ ಇಲ್ಲಿ ನಿರ್ಮಾಣವಾಗುವ ಸೀರೆಗಳಿಗೆ ದೇಶ ವಿದೇಶಗಲ್ಲಿ ಬೇಡಿಕೆ ಇದ್ದು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 5ನೇ ಬಜೆಟ್ ಮಂಡನೆ ಮಾಡಲು ನವಲಗುಂದ ಕಸೂತಿ ಕಲೆ ಇರುವ ಕೆಂಪು (ಮರೂನ್ ಕಲರ್) ಬಣ್ಣದ ಸೀರೆಯುಟ್ಟಿರುವುದು ವಿಶೇಷವಾಗಿತ್ತು. ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು ಧಾರವಾಡ ನಗರದ ನಾರಾಯಣಪುರದಲ್ಲಿ ಇರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್ಸ್ ನ ಮಹಿಳಾಮಣಿಗಳು ಅನ್ನುವುದು ಇನ್ನೂ ವಿಶೇಷ.