ಜಾರ್ಖಂಡ್‌ನ ಧನ್‌ಬಾದ್ ಬಳಿ ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಧನ್‌ಬಾದ್‌ನಿಂದ ಸುಮಾರು 21 ಕಿಮೀ ದೂರದಲ್ಲಿರುವ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್‌ನ ಭೌರಾ ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಬೆಳಗ್ಗೆ 10.30ಕ್ಕೆ ಈ ಘಟನೆ ಸಂಭವಿಸಿದೆ. ಸಾವಿಗೀಡಾದವರ ಸಂಖ್ಯೆ ಮತ್ತು ಗಾಯಗೊಂಡವರ ನಿಖರವಾದ ಸಂಖ್ಯೆ ಇನ್ನೂ ತಿಳಿದುಬಂದಿಲ್ಲ ಎಂದು ಸಿಂದ್ರಿ ಉಪ ಪೊಲೀಸ್ ವರಿಷ್ಠಾಧಿಕಾರಿ, ಅಭಿಷೇಕ್ ಕುಮಾರ್ ಹೇಳಿದ್ದಾರೆ.