ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ನಡೆದ ಪ್ರತಿಭಾ ಪುರಸ್ಕಾರ -2023 ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.
ಮಣಿಪಾಲದ ಡಾ.ಟಿ.ಎಂ.ಎ.ಪೈ ಆಡಿಟೋರಿಯಂನಲ್ಲಿ ನಡೆದ ಸಮಾರಂಭದಲ್ಲಿ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸತ್ಕರಿಸಿದರು.
ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ಮಾಹೆ ಪ್ರೊ ಚಾನ್ಸೆಲರ್ ಡಾ. ಎಚ್ ಎಸ್. ಬಲ್ಲಾಳ್, ವೈದ್ಯಕೀಯ ಅಧೀಕ್ಷಕರಾದ ಡಾ.ಅವಿನಾಶ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಪಿ.ಅಕ್ಷಯ್ ಹಾಕೆ ಮಚೀಂದ್ರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ KUWJ ಪದಾಧಿಕಾರಿಗಳು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.