spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಮಂಡ್ಯದಲ್ಲಿ ರೌಡಿಸಂ ಬಾಸ್ ಅನ್ನಲಿಲ್ಲ ಎಂದು ಯುವಕನ ಮೇಲೆ ಹಲ್ಲೆ

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮಂಡ್ಯದ ಹೊಳಲು ಗ್ರಾಮದಲ್ಲಿ ನಡೆದಿದೆ.

ಮಾದ ಅಲಿಯಾಸ್ ಮಾದಪ್ಪ ಎಂಬಾತನನ್ನು ಬಾಸ್ ಎಂದು ಕರೆಯದೇ ಇರುವುದಕ್ಕೆ ಮಾದ ಹಾಗೂ ಆತನ ಸಹಚರರಾದ ಚಿಂಟು, ತರುಣ್, ಸುಶಾಂತ್ ಹಾಗೂ ಚಂದನ್ ಎಂಬುವವರು ಶಾರಂತ್ ಎಂಬ ಯುವಕನ ಬಳಿ ಗಲಾಟೆ ಮಾಡಿದ್ದಾರೆ. ಬಳಿಕ ಮಚ್ಚಿನಿಂದ ಹೊಡೆದು, ಡ್ರಾಗನ್‍ನಿಂದ ಚುಚ್ಚಿ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಈ ಹಿಂದೆ ಮಾದಪ್ಪನಿಗೆ ಬಾಸ್ ಎಂದು ಕರೆಯಬೇಕು ಎಂದು ಪುಡಿರೌಡಿಗಳು ಎಚ್ಚರಿಸಿದ್ದರು. ಇದಕ್ಕೆ ಶಾರಂತ್ ಅವನು ನನಗೆ ಯಾವ ಬಾಸ್ ಎಂದು ಹೇಳಿದ್ದ. ಇದೇ ವಿಚಾರಕ್ಕೆ ಗುರುವಾರ ಸ್ನೇಹಿತರೊಂದಿಗೆ ಹುಟ್ಟು ಹಬ್ಬ ಆಚರಿಸಿ ಗ್ರಾಮದ ಬಳಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆ ದುಷ್ಕರ್ಮಿಗಳು ಶಾರಂತ್ ಮೇಲೆ ದಾಳಿ ನಡೆಸಿದ್ದಾರೆ.

ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -