spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ಸುವರ್ಣ ಸೌಧದ ಮುಂಭಾಗದಲ್ಲಿ ಓಬವ್ವ ಆತ್ಮರಕ್ಷಣಾ ಕಲೆ-ಕರಾಟೆ ಪ್ರದರ್ಶನ 

ಬೆಳಗಾವಿ : ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಕ್ರೈಸ್ತ ವಸತಿ ಶಾಲೆಗಳ‌ ವಿದ್ಯಾರ್ಥಿನಿಯರಿಂದ ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ಓಬವ್ವ ಆತ್ಮರಕ್ಷಣಾ ಕಲೆ-ಕರಾಟೆ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರಾಟೆ ಪ್ರದರ್ಶನ ವೀಕ್ಷಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳ ಪ್ರಾರಂಭಕ್ಕೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದರು.

ಎಲ್ಲಾ ಶಿಕ್ಷಣ ಸಂಸ್ಥೆಗಳು ಅಲ್ಪಾವಧಿ ಕೋರ್ಸುಗಳನ್ನು ಕಲಿಸುವ ಅವಶ್ಯಕತೆ ಇದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗದೊಂದಿಗೆ ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆಗೆ ಅಲ್ಪಾವಧಿ ಕೋರ್ಸುಗಳನ್ನು ಕೂಡ ಪಿಯುಸಿ ಹಂತದಿಂತ ತರಬೇತಿ ನೀಡುವುದು ಸೂಕ್ತ. ಅದರ ಬಗ್ಗೆ ಒಂದು ನಿರ್ಧಾರಕ್ಕೆ ಬರಲಾಗುವುದು ಎಂದರು.

ಆತ್ಮರಕ್ಷಣೆ ಪ್ರತಿ ನಾಗರಿಕನಿಗೆ ಅಗತ್ಯ.ನಾನು ಗೃಹ ಸಚಿವನಿದ್ದ ಸಂದರ್ಭದಲ್ಲಿ ಕೆಲವು ನಿರ್ಧಾರ ಗಳನ್ನು ತೆಗೆದುಕೊಂಡಿದ್ದು, ಆತ್ಮರಕ್ಷಣೆಗಾಗಿ ಕರಾಟೆ ತರಬೇತಿ ಯನ್ನು ಹೆಣ್ಣುಮಕ್ಕಳಿಗೆ ನೀಡಬೇಕೆಂದು ತೀರ್ಮಾನಿಸಲಾಗಿತ್ತು. ವಸತಿ ಶಿಕ್ಷಣ ಸಂಸ್ಥೆ ಇದನ್ನು ಅಳವಡಿಸಿಕೊಂಡು ದೊಡ್ಡ ಪ್ರಮಾಣದಲ್ಲಿ ಕಳೆದ ಒಂದು ವರ್ಷದಲ್ಲಿ ತರಬೇತಿ ನೀಡಿರುವುದು ಶ್ಲಾಘನೀಯ ಎಂದರು.

ಸುರಕ್ಷಿತ ಸಮಾಜ ನಿರ್ಮಾಣಕ್ಕೆ ಆತ್ಮರಕ್ಷಣಾ ಕಲೆ ಅಗತ್ಯ

ಆತ್ಮರಕ್ಷಣಾ ಕಲೆ ಕಲಿತವರು ಇತರ ಹೆಣ್ಣುಮಕ್ಕಳಿಗೆ ಈ ತರಬೇತಿ ನೀಡಬೇಕು. ಗ್ರಾಮೀಣ ಮಹಿಳೆಯರು, ದುಡಿಯುವ ಮಹಿಳೆಯರು, ಶಾಲಾ ಕಾಲೇಜುಗಳ ವಿದ್ಯಾರ್ಥಿನಿಯರು, ಸಹೋದರಿ ಯರಿಗೆ ಈ ವಿದ್ಯೆ ಕಲಿಸಿದರೆ, ದೊಡ್ಡ ಪ್ರಮಾಣದಲ್ಲಿ ಇದನ್ನು ವಿಸ್ತರಿಸಬಹುದು. ಹೆಣ್ಣುಮಕ್ಕಳಿಗೆ ಆತ್ಮರಕ್ಷಣೆ ಕಲೆ ತಿಳಿದಿದ್ದರೆ, ಹೆಣ್ಣು ಮಕ್ಕಳಿಗೆ ಹಾಗೂ ಸಮಾಜಕ್ಕೂ ಸುರಕ್ಷತೆ ನೀಡುತ್ತದೆ. ಸುರಕ್ಷಿತ ಸಮಾಜ ನಿರ್ಮಾಣವಾಗಲು.ಇದು ಅಗತ್ಯ. ಸರ್ಕಾರ ಈ ಕಾರ್ಯಕ್ರಮ ವಿಸ್ತರಿಸಿ ಹೆಣ್ಣುಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿದೆ. ನಿರ್ಭಯ ಯೋಜನೆಯನ್ನು 700 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಇದನ್ನು ಎಲ್ಲಾ ನಗರಗಳಲ್ಲಿ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ.ಈ ನಿಟ್ಟಿನಲ್ಲಿ ಎಲ್ಲಾ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಹೆಣ್ಣು ಮಕ್ಕಳು ಪ್ರತಿಯೊಂದು ಕ್ಷೇತ್ರದಲ್ಲೂ ತಮ್ಮದೇ ಆದ ಕೊಡುಗೆಗಳನ್ನು ನೀಡುತ್ತಾ ಬರುತ್ತಿದ್ದಾರೆ, ಭವ್ಯ ಭಾರತದ ಏಳಿಗೆಗಾಗಿ ಶ್ರಮಿಸುತ್ತಿದ್ದಾರೆ. ಈ ಕರಾಟೆ ಕಲೆಯ ಮಕ್ಕಳನ್ನು ನೋಡುತ್ತಿದ್ದರೆ, ಕಿತ್ತೂರು ಚನ್ನಮ್ಮ, ಬೆಳವಡಿ ಮಲ್ಲಮ್ಮ, ಕೆಳದಿಯ ಚನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮೀಬಾಯಿವರಂತೆ ದೇಶಕ್ಕೆ ಒಳ್ಳೆಯ ಸಂದೇಶಗಳ ಮೂಲಕ ಕೊಡುಗೆಗಳನ್ನು ನೀಡುವುದರಲ್ಲಿ ಯಾವ ಸಂಶಯವಿಲ್ಲ ಎಂದರು.ಅವರ ಕರಾಟೆ ಕಲೆಯ ಕುರಿತು ಮಕ್ಕಳೊಂದಿಗೆ ಚರ್ಚಿಸಿದ ಲಕ್ಷ್ಮೀ ಹೆಬ್ಬಾಳಕರ್ ಮಕ್ಕಳನ್ನು ಪ್ರೋತ್ಸಾಹಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಚಿವ ಮಾಧುಸ್ವಾಮಿ, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -