spot_img
spot_img
spot_img
24.8 C
Belagavi
Thursday, June 1, 2023
spot_img

ಡಿ. 19 ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸುವರ್ಣ ಸೌಧದ ಮುಂದೆ ಗ್ರಾಪಂ ನೌಕರರ ಪ್ರತಿಭಟನೆ

ಬೆಳಗಾವಿ : ರಾಜ್ಯದ ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಉನ್ನತಿಕರಿಸಬೇಕೆಂದು ಮತ್ತು ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಡಿಸೆಂಬರ್ 19ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ರಾಜ್ಯಾಧ್ಯಕ್ಷರಾದ ದೇವಿ ಪ್ರಸಾದ್ ಬೋಲಂ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೌಕರರ ಸಂಘಗಳ ಪ್ರಮುಖ ಬೇಡಿಕ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಕಾರ್ಯನಿರ್ತ್ತಿರುವ ಕ್ಲಾಸ್ ಕಮ್ ಡಿ ಇ ಓ ಬಿಲ್ ಕಲೆಕ್ಟರ್ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ಸಿದರ್ಜೆ ಮೇಲ್ದರ್ಜೆಗೆ ಏರಿಸಬೇಕು ಮತ್ತು ಅಟೆಂಡರ್ ಕ್ಲೀನರ್ ವಾಟರ್ ಮ್ಯಾನ್ ಚಾಲಕ ಇತ್ಯಾದಿ ವೃಂದದವರಿಗೆ ಡಿ ದರ್ಜೆಗೆ ಮೇಲ್ದರ್ಜೆಗೆ ಏರಿಸಬೇಕು.

ನಗರ ಮತ್ತು ಪಟ್ಟಣ ಪಂಚಾಯ್ತಿಗಳ ನಂತೆ ವೇತನ ಶ್ರೇಣಿ ನಿಗದಿಪಡಿಸಬೇಕು ಜೊತೆಗೆ ನೌಕರರು ಮತ್ತು ನೌಕರರ ಅವಲಂಬಿತ ಅವರಿಗೆ ಆರೋಗ್ಯ ಭದ್ರತೆಗೆ ನಿವೃತ್ತ ಜೀವನಕ್ಕೆ ಆರ್ಥಿಕ ಭದ್ರತೆಯನ್ನು ಕಲ್ಪಿಸಬೇಕು ಪಂಚಾಯತ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಾಟರ್ ಮ್ಯಾನ್ ಸ್ವಚ್ಛತೆ ನೌಕರರು ಹಾಗೂ ಇತರ ನೌಕರರಿಗೆ ಅವರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಪರಿಗಣಿಸದೆ ಹಾಗೂ ಪಂಚಾಯತಿಗಳಲ್ಲಿ ಹುದ್ದೆಗಳ ಗರಿಷ್ಠ ಮಿತಿಯನ್ನು ಮತ್ತು ಯಾವುದೇ ಕಾಲಮಿತಿಯನ್ನು ನಿಗದಿಪಡುತ್ತದೆ ಜಿಲ್ಲಾ ಪಂಚಾಯತಿಯಿಂದ ಅನುಮೋದನೆ ನೀಡಬೇಕು. ಪಂಚಾಯತ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ಜಿಲ್ಲಾ ಪಂಚಾಯತ್ ಅನುಮೋದನೆ ನೀಡಬೇಕು ಸೇವಾ ಭದ್ರತೆ ಒದಗಿಸಬೇಕು. ವಿದ್ಯಾರ್ಹತೆ ಮತ್ತು ವಯೋಮಿತಿ ಹಾಗೂ ಇತರ ಸಮಸ್ಯೆಗಳಿಂದ ಜಿಲ್ಲಾ ಪಂಚಾಯತ್ ಅನುಮೋದನೆ ಇದೆ ನಿವೃತ್ತಿಯಾದ ಹಾಗೂ ಮುಂದೆ ನಿವೃತ್ತಿಯಾಗುವ ಎಲ್ಲಾ ಗ್ರಾಮ ಪಂಚಾಯತ್ ನೌಕರರಿಗೆ ನಿವೃತ್ತ ಉಪಧನ ಮಂಜೂರು ಮಾಡಬೇಕು ಸದರಿ ನಿವೃತ್ತ ಉಪಧನ ಪಾವತಿಸಲು ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಸರ್ಕಾರವೇ ಒಂದು ಶಾಶ್ವತ ನಿಧಿಯನ್ನು ಕಾಯ್ದಿರಿಸಿ ಪಂಚಾಯತ್ ನೌಕರರ ನಿವೃತ್ತ ಆದ ಒಂದು ತಿಂಗಳ ಒಳಗಾಗಿ ಗೌರವಿತವಾಗಿ ನಿವೃತ್ತ ಉಪಧನ ಮಂಜೂರು ಮಾಡಬೇಕು ಎಂದು ಸರ್ಕಾರಕ್ಕೆ ನಾವು ಮನವಿ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -