ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಕೇಂದ್ರ ಸಚಿವರು ಭಾಗಿಯಾಗಿದ್ದರು. ಅನ್ಯ ಕೆಲಸ ಹಿನ್ನೆಲೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಭೆಗೆ ಬಂದಿರಲಿಲ್ಲ. ರಾಜ್ಯದಲ್ಲಿ ಮಳೆ ಕೊರತೆಯಿಂದ ಡ್ಯಾಮ್ಗಳಲ್ಲಿ ನೀರು ಇಲ್ಲ. 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ. 123 ವರ್ಷಗಳಲ್ಲಿ ಎಂದೂ ಇಷ್ಟು ಮಳೆ ಕೊರತೆ ಆಗಿರಲಿಲ್ಲ. ಕಾವೇರಿ ನೀರಿನ ಬಗ್ಗೆ ಹಿಂದೆ ಸುಪ್ರೀಂಕೋರ್ಟ್ ಆದೇಶ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಕಾವೇರಿ ನದಿ ನೀರು ವಿಚಾರದಲ್ಲಿ ಸಂಕಷ್ಟ ಸೂತ್ರ ಅಗತ್ಯ. ಸಂಕಷ್ಟದ ಪರಿಸ್ಥಿತಿಯಲ್ಲಿ ಎಷ್ಟು ನೀರು ಬಿಡಬೇಕಿಂದು ತಿಳಿಸಿಲ್ಲ. ಸಂಕಷ್ಟದ ಸೂತ್ರ ಏನು ಅನ್ನೋದು ತಯಾರಿಯಾಗಿಲ್ಲ. ಮಳೆ ಸಾಮಾನ್ಯವಾಗಿದ್ದರೆ 108 ಟಿಎಂಸಿ ನಾವು ಕೊಡಬೇಕಿತ್ತು. ಮುಂದೆ ಮಳೆ ಬರುವ ಆಶಾದಾಯಕವಾಗಿಲ್ಲ.
ಮಳೆ ಕೊರತೆಯಿಂದ ನಾವು ಕಷ್ಟದಲ್ಲಿ ಇದ್ದೇವೆ. ಎರಡೂ ರಾಜ್ಯಗಳ ನಾಯಕರನ್ನು ಪ್ರಧಾನಿ ಕರೆದು ಮಾತಾಡಬೇಕು. ಕೇಂದ್ರ ಜಲಸಂಪನ್ಮೂಲ ಸಚಿವರ ಭೇಟಿಗೆ ಸಮಯ ಕೇಳಲಾಗಿದೆ. ನಾಳೆ ಸುಪ್ರೀಂಕೋರ್ಟ್ಗೆ ನೀರು ಇಲ್ಲವೆಂದು ಅರ್ಜಿ ಹಾಕುತ್ತೇವೆ ಎಂದು ಹೇಳಿದರು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....