spot_img
spot_img
spot_img
34.1 C
Belagavi
Wednesday, June 7, 2023
spot_img

ಬಾಗಲಕೋಟೆ ಜಿಲ್ಲೆಯಲ್ಲಿ ನೂತನ ವಿಶ್ವ ವಿದ್ಯಾಲಯ ಸ್ಥಾಪನೆಗೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ನೂತನ ಬಾಗಲಕೋಟೆ ವಿಶ್ವವಿದ್ಯಾಲಯವನ್ನು  ಸ್ಥಾಪಿಸಿ ಆದೇಶಿಸಿದೆ. ಈ ಮೂಲಕ ರಾಜ್ಯದಲ್ಲಿ ಮತ್ತೊಂದು ವಿಶ್ವ ವಿದ್ಯಾಲಯ ಸ್ಥಾಪನೆ ಆದಂತೆ ಆಗಿದೆ.

ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಪತ್ರವನ್ನು  ಹೊರಡಿಸಿದ್ದಾರೆ. ಕಾಲೇಜುಗಳ ಮೇಲ್ವಿಚಾರಣೆಯನ್ನು ಸುಧಾರಿಸಲು ರಾಜ್ಯದ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳಲ್ಲಿ ವಿನೂತನ ಮಾದರಿಯ 7 ವಿಶ್ವ ವಿದ್ಯಾಲಯಗಳನ್ನು ಚಾಮರಾಜನಗರ, ಬೀದರ್, ಹಾವೇರಿ, ಕೊಡಗು, ಹಾಸನ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಸ್ಥಾಪಿಸಲಾಗುದು ಎಂಬುದಾಗಿ 2022-23ನೇ ಸಾಲಿನ ಅಯವ್ಯಯ ಘೋಷಣೆಯಲ್ಲಿ ಘೋಷಿಸಲಾಗಿತ್ತು ಎಂದಿದ್ದಾರೆ.

ಅದರಂತೆ ಸಾಂಪ್ರದಾಯಿಕ ವಿಶ್ವವಿದ್ಯಾಲಯಗಳಿಗಿಂತ ಭಿನ್ನವಾಗಿ ತಂತ್ರಜ್ಞಾನದ ಗರಿಷ್ಠ ಬಳಕೆಯೊಂದಿಗೆ ಹೆಚ್ಚುವರಿ ಮಾನವ ಸಂಪನ್ಮೂಲ ಉಪಯೋಗಿಸದೇ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ಬೇರ್ಪಟ್ಟ ನೂತನ ಬಾಗಲಕೋಟೆ ವಿಶ್ವವಿದ್ಯಾಲಯವನ್ನು  ಕೇಂದ್ರ ಸ್ಥಾನವನ್ನು ಜಮಖಂಡಿ, ಬಾಗಲಕೋಟೆ ಜಿಲ್ಲೆಯಲ್ಲಿ ಸ್ಥಾಪಿಸಲು ಆದೇಶಿಸಿದ್ದಾರೆ.

ಜೊತೆಗೆ ನೂತನ ಬಾಗಲಕೋಟೆ ವಿಶ್ವವಿದ್ಯಾಲಯಕ್ಕೆ ಮಾತೃ ವಿವಿಯಾದಂತ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದಿಂದ  ವರ್ಗಾವಣೆ ಆಗಬೇಕಾಗಿರುವ ಜಮೀನಿನ ದಾಖಲೆಗಳನ್ನು ಒಂದು ತಿಂಗಳೊಳಗಾಗಿ ವರ್ಗಾಯಿಸುವಂತೆ, ಸಂಬಂಧಿಸಿದ ಜಿಲ್ಲೆಯ ಜಿಲ್ಲಾಧಿಕಾರಿಗಳು ಜಮೀನಿನ ವರ್ಗಾವಣೆಗೆ ಅಗತ್ಯ ಸಹಕಾರ ನೀಡುವಂತೆಯೂ ಸೂಚಿಸಿದ್ದಾರೆ.

Related News

ತಿಂಗಳ ಸರಾಸರಿ ಮೀರಿದ್ರೆ ಹೆಚ್ಚುವರಿ ಯೂನಿಟ್‌ನ ಹಣ ಕಟ್ಟಬೇಕು: ಕೆಜೆ ಜಾರ್ಜ್

ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ...

ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕಸ್ಮಿಕ ಬೇಟಿ ಉಭಯ ಕುಶಲೋಪರಿ ವಿಚಾರಣೆ

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -