ಇಸ್ರೋದ ಮಹತ್ವಾಕಾಂಕ್ಷಿ ಚಂದ್ರಯಾನ-3 ಯೋಜನೆ ಯಶಸ್ವಿ ಹಿನ್ನೆಲೆ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಇಸ್ರೋ ವಿಜ್ಞಾನಿಗಳ ಈ ಸಾಧನೆ ಇಡೀ ದೇಶಕ್ಕೆ ಹೆಮ್ಮೆಯ ವಿಚಾರ. ನಮ್ಮ ಇಸ್ರೋ ವಿಜ್ಞಾನಿಗಳು ಹೊಸ ಇತಿಹಾಸ ಬರೆದಿದ್ದಾರೆ. ಇಸ್ರೋ ಅಧ್ಯಕ್ಷ ಸೋಮನಾಥ್ ಮತ್ತವರ ತಂಡಕ್ಕೆ ಅಭಿನಂದಿಸಿದ್ದೇನೆ. ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ನಲ್ಲಿ ವಿಜ್ಞಾನಿಗಳ ತಂಡಕ್ಕೆ ರಾಜ್ಯ ಸರ್ಕಾರದವತಿಯಿಂದ ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದರು.