spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಹಿಂದೂ ಧರ್ಮದ ಬಗ್ಗೆ ನಾನು ಅವಹೇಳನಕಾರಿ ಹೇಳಿಕೆ ನೀಡಿಲ್ಲ: ಪರಮೇಶ್ವರ್

ಹಿಂದೂ ಧರ್ಮದ ಕುರಿತು ನೀಡಿದ ಹೇಳಿಕೆಗೆ ಸ್ಪಷ್ಟನೆ ನೀಡಿದ ಗೃಹಸಚಿವ ಜಿ.ಪರಮೇಶ್ವರ್, ಹಿಂದೂ ಧರ್ಮದ ಬಗ್ಗೆ ನಾನು ಅವಹೇಳನಕಾರಿ ಹೇಳಿಕೆ ನೀಡಿಲ್ಲ.

ಹಿಂದೂ ಧರ್ಮವನ್ನು ಬೇರೆ ರೀತಿ ಅರ್ಥೈಸುವ ಕೆಲಸ ನಾನು ಮಾಡಿಲ್ಲ. ನಾವೆಲ್ಲಾ ಹಿಂದೂಗಳು, ಬೆಳಗ್ಗೆ ಎದ್ದರೆ ಗಣಪತಿಗೆ ಪ್ರಾರ್ಥಿಸುತ್ತೇನೆ. ನಾನು ಬೆಳಗ್ಗೆ ಎದ್ದ ಕೂಡಲೇ ಲಕ್ಷ್ಮೀ ಶ್ಲೋಕ ಹೇಳುತ್ತೇನೆ. ರಾತ್ರಿ ಮಲಗುವ ಮುಂಚೆ ಹನುಮನ ಶ್ಲೋಕ ಹೇಳುತ್ತೇನೆ ಎಂದು ಹೇಳಿ ಎರಡು ಶ್ಲೋಕಗಳನ್ನು ಹೇದರು.

ಅಲ್ಲದೆ, ಬಿಜೆಪಿಯವರಿಗೆ ಈ ಶ್ಲೋಕ ಹೇಳಲು ಬರುವುದಿಲ್ಲ. ಶ್ಲೋಕ ಹೇಳುವಂತೆ ಬಿಜೆಪಿಯವರಿಗೆ ಸವಾಲು ಹಾಕಿದರು. ಹಿಂದೂ ಧರ್ಮ ಯಾವಾಗ ಹುಟ್ಟಿತು ಎಂದು ನಾನು ಪ್ರಶ್ನೆ ಮಾಡಿಲ್ಲ. ನಾನು ಸರ್ವಪಲ್ಲಿ ರಾಧಾಕೃಷ್ಣನ್​ ವಿಚಾರದ ಬಗ್ಗೆ ಮಾತಾಡಿದ್ದು, ಜೈನ, ಬುದ್ಧ, ಮುಸ್ಲಿಂ ಧರ್ಮಕ್ಕೆ ಸ್ಥಾಪಕರು ಇದ್ದಾರೆ. ಆದರೆ ಹಿಂದೂ ಧರ್ಮಕ್ಕೆ ಸ್ಥಾಪಕರು ಇಲ್ಲ ಎಂದು ಹೇಳಿದ್ದರು. ಸರ್ವಪಲ್ಲಿ ರಾಧಾಕೃಷ್ಣನ್ ಮಾತನ್ನ ಉಲ್ಲೇಖಿಸಿದ್ದಕ್ಕೆ ಬಿಜೆಪಿ ಬೊಬ್ಬೆ ಹಾಕುತ್ತಿದ್ದಾರೆ.

ನಾನು ಹಿಂದೂ ಧರ್ಮದ ಬಗ್ಗೆ ಅವಹೇನಕಾರಿಯಾಗಿ ಮಾತಾಡಿಲ್ಲ. ಹಿಂದೂ ಧರ್ಮದ ಮೇಲೆ ನಮಗೆ ಗೌರವವಿದೆ, ಬಿಜೆಪಿಗೆ ಇದೆಯಾ? ಎಂದು ಪ್ರಶ್ನಿಸಿದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -