Ad imageAd image

ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ

mahantesh
ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ
WhatsApp Group Join Now
Telegram Group Join Now

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ  ಇಂದು ಪರಪ್ಪನ ಅಗ್ರಹಾರದಿಂದ  ಬಿಡುಗಡೆಯಾಗಿದ್ದಾರೆ.

6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ  ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು(ಡಿ.17) ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆ 14ನೇ ಆರೋಪಿ ಪ್ರದೂಶ್‌ ಬಿಡುಗಡೆಯಾಗಿದ್ದಾನೆ.

ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್‌ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್‌ ವಿಧಿಸಿದೆ.

ಆರೋಪಿಗಳನ್ನು ಬಂಧಿಸಿದ ನಂತರ ಪ್ರಾಸಿಕ್ಯೂಷನ್‌ ತಕ್ಷಣವೇ ಇವರನ್ನು ಯಾಕೆ ಬಂದಿಸಿದ್ದೇವೆ ಎನ್ನುವುದಕ್ಕೆ ಸರಿಯಾದ ಕಾರಣ ನೀಡಿಲ್ಲ. ಹೀಗಾಗಿ ಕಾನೂನಿನ ಈ ಲೋಪದ ಆಧಾರದಡಿ ಎಲ್ಲರ ಜಾಮೀನು ಅರ್ಜಿಗಳನ್ನು ಪುರಸ್ಕರಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ 68 ಪುಟಗಳ ತೀರ್ಪಿನಲ್ಲಿ ಹೇಳಿತ್ತು.

WhatsApp Group Join Now
Telegram Group Join Now
Share This Article