ಬೆಂಗಳೂರು: ಬಿಜೆಪಿ (BJP) 3 ಸೀಟು ಗೆಲ್ಲುವ ಹಗಲುಗನಸು ಕಾಣುತ್ತಿದ್ದರು, ಇದೀಗ ಜನರು ಅವರಿಗೆ ಉತ್ತರ ಕೊಟ್ಟಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ (Karnataka) 3 ಕ್ಷೇತ್ರದಲ್ಲಿ ಕಾಂಗ್ರೆಸ್ಗೆ (Congress) ನ್ನಡೆಯಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ 18 ಸಾವಿರ ಲೀಡ್ ಇದೆ. ಶಿಗ್ಗಾಂವಿ, ಸಂಡೂರಿನಲ್ಲಿಯೂ ಲೀಡ್ ಇದೆ. 3 ಕ್ಷೇತ್ರದಲ್ಲಿಯೂ ನಾವು ಗೆಲ್ಲುತ್ತೇವೆ. ಮೂರು ಸೀಟು ಗೆಲ್ಲುವ ಮೂಲಕ ಬಿಜೆಪಿ (BJP) ಹಗಲುಗನಸು ಕಾಣುತ್ತಿದ್ದರು. ಜನರು ಇದೀಗ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು.
ಬೊಮ್ಮಾಯಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಬೊಮ್ಮಾಯಿ ವಿರುದ್ದ ಅಲ್ಪಸಂಖ್ಯಾತ ಅಭ್ಯರ್ಥಿ ಇದ್ದಾರೆ ಎಂದು ಹೇಳಿದ್ದರು. ಆದರೆ ಅದೇ ಅಲ್ಪಸಂಖ್ಯಾತ ಅಭ್ಯರ್ಥಿಯ ವಿರುದ್ಧ ಅಲ್ಲಾಡುತ್ತಿದ್ದಾರೆ. ನಮ್ಮ ಪಕ್ಷ ಎಲ್ಲಾ ಜಾತಿ ಧರ್ಮಗಳಿಗೆ ಅವಕಾಶ ಕೊಡುತ್ತದೆ. ಚನ್ನಪಟ್ಟಣದಲ್ಲಿ ಅಲ್ಪಸಂಖ್ಯಾತ ವೋಟ್ ನಮಗೆ ಸಹಕಾರ ಆಗಿದೆ. ಮೂರು ಕ್ಷೇತ್ರದಲ್ಲಿ 1 ಕ್ಷೇತ್ರ ಕೊಡುವ ಚರ್ಚೆ ಆಗಿತ್ತು. ಚನ್ನಪಟ್ಟಣ ಯೋಗೇಶ್ವರ್ ಬರುವುದು ಯಾರಿಗೂ ಗೊತ್ತಿಲ್ಲ. ಎಲ್ಲಾ ಲೆಕ್ಕಾಚಾರ ನೋಡಿ ಟಿಕೆಟ್ ಕೊಡಲಾಗಿದೆ ಎಂದು ತಿಳಿಸಿದರು.
ಚನ್ನಪಟ್ಟಣದಲ್ಲಿ (Channapatna) ಯೋಗೇಶ್ವರ್ (CP Yogeshwar) ಅನುಭವ, ಅವರ ವೋಟು ಹಾಗೂ ಕಾಂಗ್ರೆಸ್ ವೋಟ್ನಿಂದ ಗೆಲ್ಲುತ್ತಿದ್ದಾರೆ. ಜೆಡಿಎಸ್ ಅವರು ಪದೇ ಪದೇ ಅವರು ಕುಟುಂಬಕ್ಕೆ ಟಿಕಟ್ ಕೊಡುತ್ತಿರುವುದು ವಿರೋಧ ಆಗಿರಬಹುದು. ದೇವೇಗೌಡರು ಸರ್ಕಾರ ಕಿತ್ತು ಒಗೆಯುತ್ತೇನೆ ಎಂದಿದ್ದರು. ಆದರೆ ಸರ್ಕಾರವನ್ನ ಯಾರಿಂದಲೂ ಕಿತ್ತು ಒಗೆಯಲು ಸಾಧ್ಯವಿಲ್ಲ. ಜನರು ಅದನ್ನ ನಿರ್ಧಾರ ಮಾಡುತ್ತಾರೆ. ತಮ್ಮದೇ ಕುಟುಂಬದ ಅಭ್ಯರ್ಥಿ ಹಾಕಿರುವುದರಿಂದ ಜನ ನೋಡಿ ಮತ ಹಾಕಿದ್ದಾರೆ. ನಮ್ಮ ಪಕ್ಷದ ನಾಯಕರು ಒಟ್ಟಾಗಿ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.