spot_img
spot_img
spot_img
21.1 C
Belagavi
Friday, September 30, 2022
spot_img

ಕ್ರಿಯಾಯೋಜನೆಗಳಿಗೆ ಸಕಾಲದಲ್ಲಿ ಅನುಮೋದನೆ ಪಡೆಯಬೇಕು: ಡಿಸಿ ನಿತೇಶ್ ಪಾಟೀಲ

spot_img

ಬೆಳಗಾವಿ : ಬಜೆಟ್ ಘೋಷಣೆಗಳು ಹಾಗೂ ಅನುಷ್ಠಾನ ಕುರಿತು ಮುಖ್ಯಮಂತ್ರಿಗಳು ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಆದ್ದರಿಂದ ಪ್ರಸಕ್ತ ಬಜೆಟ್ ನಲ್ಲಿ ಘೋಷಿಸಲಾಗಿರುವ ಪ್ರತಿಯೊಂದು ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಸಮಗ್ರವಾಗಿ ಪರಿಶೀಲಿಸಿ ಕ್ರಿಯಾ ಯೋಜನೆಯ ಅನುಮೋದನೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

ಮುಖ್ಯಮಂತ್ರಿಗಳು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯನ್ನು ನಡೆಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಮೇ 6) ನಡೆದ ಎಲ್ಲ ಇಲಾಖೆಯ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಜೆಟ್ ನಲ್ಲಿ ಘೋಷಿಸಿರುವಂತೆ “ಜಾಂಬೋಟಿ ಜೇನು” ಬ್ರ್ಯಾಂಡ್ ನಿರ್ಮಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು.

ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಬೆಲ್ಲ ತಯಾರಿಕಾ ಘಟಕಗಳನ್ನು ನಿರ್ಮಿಸಲಾಗುತ್ತಿದ್ದು, ಈಗಾಗಲೇ ಚಾಲ್ತಿಯಲ್ಲಿರುವ 247 ಘಟಕಗಳಿಗೆ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ನೆರವು ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಜೆಟ್ ನಲ್ಲಿ ಅಥಣ ಗೆ ಮಂಜೂರಾಗಿರುವ ಕೃಷಿ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ಪಡೆದುಕೊಂಡ ಅವರು, ಜಮೀನು ಲಭ್ಯತೆ ಮತ್ತಿತರ ವಿಷಯಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಈ ಬಾರಿ ಜಿಲ್ಲೆಯ ಬಿತ್ತನೆ ಪ್ರಮಾಣ ಶೇ.100 ಕ್ಕಿಂತ ಅಧಿಕವಾಗಬೇಕು. ಜಿಲ್ಲೆಗೆ ಮಂಜೂರಾಗಿರುವ ಗೋಶಾಲೆಗಳ ನಿರ್ಮಾಣಕ್ಕೆ ಜಮೀನು ಗುರುತಿಸಬೇಕು ಎಂದು ತಿಳಿಸಿದರು.

ಕುಡಿಯುವ ನೀರು ಪೂರೈಕೆ ಹಾಗೂ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಅಗತ್ಯತೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಮುಂಜಾಗ್ರತಾ ಲಸಿಕೆ ಪ್ರಮಾಣ ಹೆಚ್ಚಿಸಲು ಸೂಚನೆ:

ಮುಂಜಾಗ್ರತಾ ಕ್ರಮವಾಗಿ ನೀಡಲಾಗುತ್ತಿರುವ ಕೋವಿಡ್ ಲಸಿಕೆಯನ್ನು ಮನೆ ಮನೆಗೆ ಹೋಗಿ ನೀಡಬೇಕು. ಇದಕ್ಕಾಗಿ ಒಂದು ಸಹಾಯವಾಣ ಕೇಂದ್ರ ಸ್ಥಾಪಿಸುವ ಮೂಲಕ ಬೇಡಿಕೆ ಆಧರಿಸಿ ಮನೆ ಮನೆಗೆ ಹೋಗಿ ಲಸಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನಿರ್ದೇಶನ ನೀಡಿದರು.

ಮುಂಜಾಗ್ರತಾ ಲಸಿಕೆ ಪಡೆಯದಿರುವವರನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸಿ ಲಸಿಕೆ ನೀಡಬೇಕು. ಇದಕ್ಕಾಗಿ ಸ್ಥಳೀಯ ಸಂಸ್ಥೆಗಳ ನೆರವು ಒದಗಿಸಲಾಗುವುದು ಎಂದರು.

ಕಿದ್ವಾಯಿ ಪ್ರಾದೇಶಿಕ ಆರೋಗ್ಯ ಕೇಂದ್ರ ಸ್ಥಾಪನೆಗಾಗಿ ವಡಗಾವಿಯಲ್ಲಿ ನಾಲ್ಕು ಎಕರೆ ಜಾಗೆ ಗುರುತಿಸಲಾಗಿದೆ. ಈ ಬಗ್ಗೆ ಪ್ರಕ್ರಿಯೆ ನಡೆದಿದೆ ಎಂದು ಡಿಎಚ್‍ಓ ಡಾ.ಎಸ್.ವಿ.ಮುನ್ಯಾಳ ಮಾಹಿತಿ ನೀಡಿದರು.

ಬಿತ್ತನೆಗೆ ಬೀಜಗಳ ಶೇಖರಣೆ:

ಬಿತ್ತನೆಗೆ ಬೇಕಾಗುವ 56 ಸಾವಿರ ಕ್ವಿಂಟಲ್ ಬೀಜಗಳ ಶೇಖರಣೆ ಮಾಡಲಾಗಿದೆ. ಸದ್ಯಕ್ಕೆ ಬಿತ್ತನೆ ಪ್ರಮಾಣ ಶೇ.97 ರಷ್ಟಾಗಿದ್ದು, ಬೀಜ-ಗೊಬ್ಬರ ಕೊರತೆಯಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ವಿವರಿಸಿದರು.

100 ಗೋಶಾಲೆ ಹಾಗೂ ಪಶು ಚಿಕಿತ್ಸಾಲಯಗಳ ಸ್ಥಾಪನೆಗೆ ಬಜೆಟ್ ನಲ್ಲಿ ಘೋಷಣೆಯಾಗಿದ್ದು, ಜಿಲ್ಲಾವಾರು ಎಷ್ಟು ನಿರ್ಮಿಸಬೇಕೆಂದು ನಿಗದಿಯಾಗಿಲ್ಲ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್ ವಿವರಿಸಿದರು.

spot_img

Related News

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -