ಬೆಂಗಳೂರು: ಜೆಡಿಎಸ್ನ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ.
ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇಮದು (ಸೆಪ್ಟೆಂಬರ್ 01) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ.
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...