ನಾಳೆ ವಂದೇ ಭಾರತ್ ರೈಲಿಗೆ ಚಾಲನೆ ನೀಡುತ್ತೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಆಮದು ಮಾಡಿಕೊಳ್ಳುವ ಕಾಲ ಇತ್ತು. ಇವತ್ತು ನಮ್ಮ ದೇಶ ಹೆಚ್ಚು ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡುತ್ತಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಕಿ ಅಕ್ಕಿ ಎಂದು ಮಾತನಾಡುತ್ತಾರೆ. ನಾವು ಕಾಂಗ್ರೆಸ್ನವರಿಗೆ ಉತ್ತರ ಕೊಡಬೇಕಾಗಿದೆ. ಕಳೆದ 3 ವರ್ಷಗಳಿಂದ 80 ಕೋಟಿ ಜನರಿಗೆ ಅಕ್ಕಿ ಕೊಡುತ್ತಿದ್ದೇವೆ. ಅಕ್ಕಿ ಬಗ್ಗೆ ಕಾಂಗ್ರೆಸ್ ನಾಯಕರನ್ನು ಕೇಳಿ ಎಂದರು. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅಕ್ಕಿ ಖರೀದಿಸಿ ಕೊಡುತ್ತಿದ್ದಾರೆ. ಅಕ್ಕಿ ವಿತರಣೆ ಮುಂದೆ ಹಾಕಿದರೆ ಹಣ ಉಳಿಸಬಹುದೆಂಬ ಲೆಕ್ಕಾಚಾರದಲ್ಲಿ ಕೈ ನಾಯಕರಿದ್ದಾರೆ. 2 ತಿಂಗಳ ಮುಂದೆ ಹಾಕಿದರೆ 2 ಸಾವಿರ ಕೋಟಿ ಹಣ ಉಳಿಸಬಹುದು. ಹೀಗಾಗಿ ರಾಜ್ಯ ಕಾಂಗ್ರೆಸ್ ನಾಯಕರು ಸುಳ್ಳು ಹೇಳುತ್ತಿದ್ದಾರೆ ಎಂದರು.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...