ಮೈಸೂರು ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಪಾಲ್ಗೊಂಡರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ರವಿಶಂಕರ್, ಹರೀಶ್ ಗೌಡ, ದರ್ಶನ್ ಧ್ರುವ ನಾರಾಯಣ್ , ಮೈಸೂರು ಜಿಲ್ಲಾಧಿಕಾರಿ ರಾಜೇಂದ್ರ, ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್, ಮಂಡ್ಯ ಜಿಲ್ಲಾಧಿಕಾರಿ ಕುಮಾರ್ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.