ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಆಸನದ ಬಳಿ ಐತಿಹಾಸಿಕ ರಾಜದಂಡ ಸೆಂಗೋಲ್ ಸ್ಥಾಪಿಸಲಾಯಿತು. ಇದೇ ಸಂದರ್ಭದಲ್ಲಿ ಪೂಜೆ ಹಾಗೂ ಸರ್ವಧರ್ಮ ಪ್ರಾರ್ಥನೆ ನಡೆಯಿತು. ನೂತನ ಕಟ್ಟಡದ ಸ್ಮರಣ ಫಲಕವನ್ನು ಅನಾವರಣಗೊಳಿಸಿದರು. ಸಮಾರಂಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಅಧೀನಂ ಗಣ್ಯರು ಉಪಸ್ಥಿತರಿದ್ದರು.
ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದ ಮೋದಿ ಅವರು ಸಂಸತ್ತಿನ ಗೇಟ್ ನಂ.1 ರಿಂದ ಸಂಸತ್ ಆವರಣಕ್ಕೆ ಕಾಲಿಟ್ಟರು ಮತ್ತು ಅವರನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸ್ವಾಗತಿಸಿದರು.
ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಶ್ರಮಿಸಿದ ಕಾರ್ಮಿಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸನ್ಮಾನ ಮಾಡಿದರು. ಸಾಂಪ್ರದಾಯಿಕ ಶಾಲು ಹೊದಿಸಿ, ಸ್ಮರಣಿಕೆ ನೀಡುವ ಮೂಲಕ ಕಾರ್ಮಿಕರಿಗೆ ಪ್ರಧಾನಿ ಮೋದಿಯವರು ಗೌರವ ಸಲ್ಲಿಸಿದರು. ಆಗಸ್ಟ್ 14, 1947 ರಂದು ಬ್ರಿಟಿಷ್ ಗುಲಾಮಗಿರಿ ಆಳ್ವಿಕೆಯಿಂದ ಮುಕ್ತಿ ಪಡೆದ ಭಾರತಕ್ಕೆ ಅಧಿಕಾರವನ್ನು ಹಸ್ತಾಂತರಿಸುವ ಸೂಚಕವಾಗಿ ಸಂಗೋಲ್ ಅನ್ನು ಭಾರತೀಯರಿಗೆ ಬ್ರಿಟೀಷರು ನೀಡಿದ್ದರು.