spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಇದು ಜನರ ಜಿ20 ಎಂದ ಪ್ರಧಾನಿ ಮೋದಿ

ನವದೆಹಲಿ: ಜಿ 20 ಸದಸ್ಯ (ರಾಷ್ಟ್ರಗಳ ಅನುಮೋದನೆಯ ನಂತರ, ಆಫ್ರಿಕನ್ ಯೂನಿಯನ್ ಕೂಡ ಸದಸ್ಯ ರಾಷ್ಟ್ರಗಳ ಶಾಶ್ವತ ಸದಸ್ಯತ್ವವನ್ನು ಪಡೆಯುತ್ತಿದೆ ಮತ್ತು ಯುರೋಪಿಯನ್ ಒಕ್ಕೂಟದಲ್ಲಿಯೂ ಇದೇ ಸ್ಥಾನಮಾನವನ್ನು ಪಡೆಯುತ್ತದೆ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು. ಜಿ 20 ಶೃಂಗಸಭೆಯ  ಉದ್ಘಾಟನಾ ಭಾಷಣ ಮಾಡಿದ ಅವರು, ಭಾರತದ ಗಮನವು ಮಾನವ ಕೇಂದ್ರಿತ ಮತ್ತು ಅಂತರ್ಗತ ಅಭಿವೃದ್ಧಿಯ ಮೇಲಿದೆ ಎಂದು ಹೇಳಿದರು. ಶೃಂಗಸಭೆಯನ್ನು ಅವರು ‘ಜನರ G20′ ಎಂದು ಬಣ್ಣಿಸಿದರು.

ಮೊರಾಕೊದಲ್ಲಿ ಸಂಭವಿಸಿದ ಭೂಕಂಪದ ಬಗ್ಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದರು. ಸಂತ್ರಸ್ತರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ ಮೋದಿ, ಇಡೀ ಜಾಗತಿಕ ಸಮುದಾಯವು ಮೊರಾಕೊದ ಜನರೊಂದಿಗೆ ನಿಂತಿದೆ ಎಂದು ಹೇಳಿದರು. ಎಲ್ಲಾ ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ಮೊರಾಕೊಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಮೋದಿ ಹೇಳಿದರು.

ಆಫ್ರಿಕನ್ ಯೂನಿಯನ್ ಸದಸ್ಯಸತ್ವದ ಬಗ್ಗೆ ಪ್ರಸ್ತಾಪಿಸಿದ ಮೋದಿ, ನಿಮ್ಮೆಲ್ಲರ ಒಪ್ಪಿಗೆಯೊಂದಿಗೆ ಆಫ್ರಿಕನ್ ಯೂನಿಯನ್ ಇಂದಿನಿಂದ ಜಿ20 ಖಾಯಂ ಸದಸ್ಯತ್ವ ಪಡೆಯಲಿದೆ ಎಂದು ಘೋಷಿಸಿದರು. ಇದಕ್ಕೆ ಎಲ್ಲ ನಾಯಕರು ಚಪ್ಪಾಳೆಯೊಂದಿಗೆ ಸಹಮತ ವ್ಯಕ್ತಪಡಿಸಿದರು. ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಆಫ್ರಿಕನ್ ಯೂನಿಯನ್ ಅಧ್ಯಕ್ಷ ಅಜಾಲಿ ಅಸ್ಸೌಮಾನಿ ಅವರನ್ನು ವೇದಿಕೆಗೆ ಕರೆತಂದರು ಮತ್ತು ಪ್ರಧಾನಿ ಮೋದಿ ಅವರನ್ನು ತಬ್ಬಿ ಅಭಿನಂದಿಸಿದರು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -