ಮಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 1 ಮತ್ತು 2ರಂದು ಕರ್ನಾಟಕ ಹಾಗೂ ಕೇರಳಕ್ಕೆ ಭೇಟಿ ನೀಡಲಿದ್ದಾರೆ.
ಸೆಪ್ಟೆಂಬರ್ 2ರಂದು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ ನೀಡಲಿದ್ದು ಪ್ರಧಾನಿ ಮೋದಿಗೆ ಪರಶುರಾಮ ಪುತ್ಥಳಿ ಉಡುಗೊರೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಉಸ್ತುವಾರಿ ಸಚಿವ ಸುನೀಲ್ ಕುಮಾರ್ ನೇತೃತ್ವದಲ್ಲಿ ತುಳುನಾಡು ನಿರ್ಮಾತೃ ಪರಶುರಾಮನ ಪುತ್ಥಳಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಮಾವೇಶದಲ್ಲಿ ಮೋದಿಗೆ ಉಡುಗೊರೆಯಾಗಿ ಪುತ್ಥಳಿ ನೀಡಲಾಗುತ್ತೆ. ಕಾರ್ಯಕ್ರಮಕ್ಕೆ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು ಸಮಾವೇಶ ಸ್ಥಳಕ್ಕೆ ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಕರೆತರಲು 2000 ಬಸ್ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದ ಬಳಿಕ 1 ಗಂಟೆ ಕಾಲ ರಾಜ್ಯ ಬಿಜೆಪಿ ನಾಯಕರ ಜೊತೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ.