ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಸ್ರೋ ವಿಜ್ಞಾನಿಗಳ ಅಭಿನಂದನೆ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗದೇ ತೆರಳಿದ್ದಾರೆ. ಈ ಮೂಲಕ ಮೋದಿಯವರ ಭೇಟಿ ಕೇವಲ ಇಸ್ರೋ ವಿಜ್ಞಾನಿಗಳ ಅಭಿನಂದನೆಗೆ ಮಾತ್ರ ಸೀಮಿತವಾಗಿದೆ.
ಬೆಂಗಳೂರಿನ ಇಸ್ರೋ ಕಚೇರಿಯಲ್ಲಿ ಚಂದ್ರಯಾನ -3ರ ಯಶಸ್ಸಿಗೆ ಶ್ರಮಿಸಿದ ವಿಜ್ಞಾನಿಗಳಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಿದರು. ಈ ವೇಳೆ ರಾಜ್ಯ ಬಿಜೆಪಿ ನಾಯಕರು ಪ್ರಧಾನಿ ಭೇಟಿಯ ನಿರೀಕ್ಷೆಯಲ್ಲಿದ್ದರು. ಆದರೆ ಪ್ರಧಾನಿ ಮೋದಿಯವರು ಯಾವುದೇ ನಾಯಕರನ್ನು ಭೇಟಿಯಾಗದೆ ನೇರವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಕಾರ್ಯಕ್ರಮದ ಬಳಿಕ ಕೂಡ ಬಿಜೆಪಿ ನಾಯಕರನ್ನು ಭೇಟಿಯಾಗದೆ ದೆಹಲಿಗೆ ತೆರಳಿದ್ದಾರೆ.
ಚುನಾವಣಾ ಫಲಿತಾಂಶದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಬಂದಿದ್ದರು. ಚಂದ್ರಯಾನ 3ರ ಯಶಸ್ಸು ಹಿನ್ನೆಲೆ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಕೆಗೆ ಅವರು ಬಂದಿದ್ದು, ಈ ನಿರ್ದಿಷ್ಟ ಕಾರ್ಯಕ್ರಮಕ್ಕೆ ಮಾತ್ರ ಸಮಯ ನಿಗದಿಪಡಿಸಲಾಗಿತ್ತು.