ಬೆಳಗಾವಿ: 10 ದಿನಗಳ ಕಾಲ ಚಳಿಗಾಲ ಅಧಿವೇಶ ನಡೆಯಲಿದೆ. ಡಿಸೆಂಬರ್ 19ರಿಂದ ಡಿ.30ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ಹೀಗಾಗಿ ಸುವರ್ಣ ಸೌಧ ಸುತ್ತ ಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಡಿ.30ರವರೆಗೆ ಸುವರ್ಣಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಹೇಳಿದ್ದಾರೆ.
ನಗರದಲ್ಲಿ ಯಾವುದೇ ಪ್ರತಿಭಟನೆ, ಗುಂಪು ಕಟ್ಟಿಕೊಂಡು ಓಡಾಡಲು ನಿಷೇಧಿಸಲಾಗಿದೆ. ಶಾಸಕರು, ಪರಿಷತ್ ಸದಸ್ಯರು, ಅಧಿಕಾರಿಗಳು ಸೇರಿದಂತೆ ಅಧಿವೇಶನ ಸಂದರ್ಭದಲ್ಲಿ ಬೆಳಗಾವಿ ನಗರಕ್ಕೆ 10 ಸಾವಿರ ಮಂದಿ ಆಗಮಿಸಲಿದ್ದಾರೆ.