ಕಂದಾಯ ಇಲಾಖೆಯ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧ ಇದೀಗ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಆಗಿದೆ. ಈ ಪಟ್ಟಿಯಲ್ಲಿ ಹೆಸರು ಪಡೆದಿರುವ ಅಭ್ಯರ್ಥಿಗಳು ಈಗ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಾಗಿದೆ.
ಒಟ್ಟು 30 ಜಿಲ್ಲೆಗಳು ಸಹ ತಮ್ಮ ತಮ್ಮ ಜಿಲ್ಲಾ ಅಧಿಕೃತ ವೆಬ್‌ಸೈಟ್‌ಗಳಲ್ಲಿ, ತಮ್ಮ ಜಿಲ್ಲೆಯಲ್ಲಿ ಭರ್ತಿ ಮಾಡಲಿರುವ ಹುದ್ದೆಗಳಿಗೆ ಅನುಗುಣವಾಗಿ 1:3 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿವೆ. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸಿದ ಜಿಲ್ಲೆಯ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಹತಾ ಪಟ್ಟಿ ಚೆಕ್ ಮಾಡಿಕೊಳ್ಳಬಹುದಾಗಿದೆ.
ಆಯಾ ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿ ತಾತ್ಕಾಲಿಕ ಆಯ್ಕೆಪಟ್ಟಿಯ ಪ್ರಕಟಣೆಯಲ್ಲಿ 1:3 ಅಭ್ಯರ್ಥಿಗಳಿಗೆ ಎಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ, ಯಾವ ಸಮಯದಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ ಎಂದು ತಿಳಿಸಲಾಗಿರುತ್ತದೆ.