Ad imageAd image

ಬಿಜೆಪಿ ಸರ್ಕಾರದ ಕೊರೊನಾ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಶಿಫಾರಸು

ratnakar
ಬಿಜೆಪಿ ಸರ್ಕಾರದ ಕೊರೊನಾ ಹಗರಣ: ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಶಿಫಾರಸು
WhatsApp Group Join Now
Telegram Group Join Now

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೊರೊನಾ ( ಕೋವಿಡ್ ) ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಐ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೂಕಲ್ ಡಿ.ಮೈಕಲ್ ಕುನ್ಹಾ ಆಯೋಗ ಹೇಳಿದೆ. ಈ ಸಂಬಂಧ ಅಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಆಯೋಗ ಶಿಫಾರಸು ಮಾಡಿದೆ.

ಅಂದಿನ ಸರ್ಕಾರ ಚೀನಾ ಕಂಪನಿಗಳಿಂದ ಪಿಪಿಐ ಕಿಟ್ ಖರೀದಿ ಮಾಡಿತ್ತು. ಪಿಪಿಐ ಕಿಟ್ ಖರೀದಿ ವೇಳೆ ದರದಲ್ಲಿ ಭಾರಿ ವ್ಯತ್ಯಾಸ ಕಂಡುಬಂದಿದೆ. ದರ ವ್ಯತ್ಯಾಸದಿಂದ ಪಿಪಿಐ ಕಿಟ್ ಪೂರೈಕೆದಾರರಿಗೆ 14.21 ಕೋಟಿ ರೂ. ಲಾಭವಾಗಿದೆ. ಪೂರೈಕೆದಾರರಿಗೆ ಲಾಭ ಮಾಡಿಕೊಡುವ ದುರುದ್ದೇಶದಿಂದ ಅಕ್ರಮ ಎಸಗಲಾಗಿದೆ ಎಂದು ವರದಿಯಾಗಿದೆ.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ.ಕುನ್ಹಾ ನೇತೃತ್ವದಲ್ಲಿ ಆಗಸ್ಟ್ 25, 2023 ರಲ್ಲಿ ರಚನೆಯಾಗಿರುವ ತನಿಖಾ ಆಯೋಗವು ಮಧ್ಯಂತರ ವರದಿಯನ್ನು ಸಲ್ಲಿಸಿದೆ. ಒಟ್ಟು 769 ಕೋಟಿ ರೂ. ಅವ್ಯವಹಾರ ನಡೆದಿರುವುದು ಪತ್ತೆ ಮಾಡಿದೆ.

ಚೀನಾದ ಸಂಸ್ಥೆಗಳಿಂದ 3 ಲಕ್ಷ ಪಿಪಿಐ ಕಿಟ್‌ಗಳನ್ನು ನೇರವಾಗಿ ಖರೀದಿಸುವ ಕುರಿತು ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶಿಸಿದರು. ಎರಡು ಚೀನಾ ಸಂಸ್ಥೆಗಳಿಂದ ಪಿಪಿಐ ಕೆಟ್ಗಳನ್ನು ದುಬಾರಿ ದರದಲ್ಲಿ ಖರೀದಿಸಲಾಗಿದೆ ಎಂದು ಬಯಲಾಗಿದೆ. ಹೀಗಾಗಿ, ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಆಯೋಗ ಶಿಫಾರಸು ಮಾಡಿದೆ.

 

WhatsApp Group Join Now
Telegram Group Join Now
Share This Article