spot_img
spot_img
spot_img
28.1 C
Belagavi
Thursday, September 29, 2022
spot_img

ಫೆ.27 ರಂದು ಪಲ್ಸ್ ಪೊಲೀಯೋ ಕಾರ್ಯಕ್ರಮ

spot_img

ಬೆಳಗಾವಿ: ಅಲೆಮಾರಿ ಜನಾಂಗ, ಗುಡ್ಡಗಾಡು ನಿವಾಸಿಗಳು ಹಾಗೂ ವಲಸೆ ಕಾರ್ಮಿಕರ ಮಕ್ಕಳು ಸೇರಿದಂತೆ ಯಾವುದೇ ಮಗು ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಜನವಸತಿ ಹೊರತುಪಡಿಸಿ ಬೇರೆ ಕಡೆಗಳಲ್ಲಿ ವಾಸಿಸುವ ಮಕ್ಕಳಿಗೆ ಲಸಿಕೆ ನೀಡಲು 23 ಮೊಬೈಲ್ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಫೆಬ್ರುವರಿ 27 ರಂದು ಜರಗುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ(ಫೆ.17) ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪೋಲಿಯೋ ಮುಕ್ತ ಭಾರತ ಮಾಡಲು ಎಲ್ಲ ಪೋಷಕರು, ಇಲಾಖೆಯವರು ಹಾಗೂ ಸಂಘ- ಸಂಸ್ಥೆಗಳು ಕೈ ಜೋಡಿಸಬೇಕು.

ಕಳೆದ 2011 ರಿಂದ ಈಚೆಗೆ ಭಾರತ ದೇಶದಲ್ಲಿ ಯಾವುದೇ ವೈಲ್ಡ್ ಪೊಲಿಯೋ ವೈರಸ್ ಪ್ರಕರಣಗಳು ಕಂಡುಬಂದಿಲ್ಲ. 2017 ರಲ್ಲಿ ಕೊನೆಯದಾಗಿ ಬಿಹಾರ ಮೂಲದ ಕಾರ್ಮಿಕರ ಮಕ್ಕಳಲ್ಲಿ ಬೆಂಗಳೂರಿನಲ್ಲಿ ಪೋಲಿಯೋ ಪ್ರಕರಣ ವರಿದಿಯಾಗಿತ್ತು, 21 ವರ್ಷದಿಂದ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಪೋಲಿಯೋ ಪ್ರಕರಣಗಳು ಕಂಡುಬಂದಿಲ್ಲ ಎನ್ನುವುದು ಹೆಮ್ಮೆಯ ವಿಷಯ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಎಲ್ಲ ಮಕ್ಕಳಿಗೆ ಲಸಿಕೆ ಹಾಕಿಸಿ ಪೋಲಿಯೋ ಮುಕ್ತ ಭಾರತ ಮಾಡಲು ಪೋಷಕರು ಇಲಾಖೆಯವರು ಹಾಗೂ ಸಂಘ ಸಂಸ್ಥೆಗಳು ಕೈ ಜೋಡಿಸಬೇಕು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಎಲ್ಲ ಆರೋಗ್ಯ ಕಾರ್ಯಕರ್ತೆಯರಿಗೆ ತರಬೇತಿ ಹಾಗೂ ಇನ್ನಿತರೆ ಪೂರ್ವ ಸಿದ್ದತೆಯನ್ನು ಮಾಡಿಕೊಳ್ಳಬೇಕು ಎಂದು ತಿಳಿಸಿದರು ಜಿಲ್ಲೆಯಲ್ಲಿ ಒಟ್ಟು 2397 ಪೋಲಿಯೋ ಬೂತ್ ಗಳನ್ನು ಸ್ಥಾಪಿಸಲಾಗಿದೆ. ಅಲ್ಲದೇ ಬಸ್ ನಿಲ್ದಾಣ, ರೇಲ್ವೆ ನಿಲ್ದಾಣ ಮುಂತಾದ ಕಡೆಗಳಲ್ಲಿ ಟ್ರಾನ್ಸಿಟ್ ಬೂತ್ ಗಳನ್ನು ಸ್ಥಾಪಿಸಿದ್ದು, 9435 ಕಾರ್ಯಕರ್ತೆಯರನ್ನು ಹಾಗೂ 647 ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದರು.

ತಾಲೂಕು ಮಟ್ಟದಲ್ಲಿ ತಾಲೂಕು ಟಾಸ್ಕ ಪೋರ್ಸ ಗಳನ್ನು ತಾಲೂಕು ಆರೋಗ್ಯ ಅಧಿಕಾರಿಗಳು, ತಶಿಲ್ದಾರರ ಸಹಯೋಗದಲ್ಲಿ ರಚಿಸಬೇಕು. ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯತ್ ಪಿ.ಡಿ.ಓ ಮತ್ತು ಸಿಬ್ಬಂದಿಗಳು ಡಂಗುರ ಹಾಕಿಸುವ ಮೂಲಕ ಜನರಲ್ಲಿ ಪೋಲಿಯೋ ಜಾಗೃತಿ ಮೂಡಿಸಬೇಕು. ಯಾವುದೇ ಮಗು‌ ಪೊಲಿಯೋ ಲಸಿಕೆಯಿಂದ ವಂಚಿತಗೊಳ್ಳದಂತೆ ಕ್ರಮ ಕೈಗೊಳ್ಳಬೇಕು.

ಪೋಲಿಯೋ ಕಾರ್ಯಕ್ರಮವನ್ನು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎನ್.ಸಿ.ಸಿ, ಎನ್.ಎಸ್.ಎಸ್, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ರೋಟರಿ, ಲಯನ್ಸ್ ನವರು, ಶಿಕ್ಷಣ ಇಲಾಖೆಯಿಂದ ಜಾಥಾ ಕಾರ್ಯಕ್ರಮ, ಸರ್ಕಾರಿ ಮತ್ತು ಸರ್ಕಾರೇತರ  ಆಸ್ಪತ್ರೆಗಳಲ್ಲಿ ಬೂತ್ ಗಳ ಮೂಲಕ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಫೆ.27 , 28 ಮತ್ತು ಮಾರ್ಚ್ 1, 2 ರಂದು ಪೋಲಿಯೋ ಕಾರ್ಯಕ್ರಮ :

ಫೆ.27 ರಂದು ಪೋಲಿಯೋ ಭಾನುವಾರ ಕಾರ್ಯಕ್ರಮ ದೇಶಾಂದ್ಯಂತ ಹಮ್ಮಿಕೊಳ್ಳಲಾಗಿದೆ. ಇದರೊಂದಿಗೆ ಒಟ್ಟು ನಾಲ್ಕು ದಿನಗಳ ಕಾಲ ಪೋಲಿಯೋ ಕಾರ್ಯಕ್ರಮ ನಡೆಸಲಾಗುವುದು. ಮೊದಲನೇ ದಿನ ಪೋಲಿಯೋ ಬೂತ್ ಗಳಲ್ಲಿ ಪೋಲಿಯೊ ಹನಿ ನೀಡಲಾಗುವುದು ಮತ್ತು ಅನಿವಾರ್ಯ ಕಾರಣಗಳಿಂದ ಲಸಿಕೆ ವಂಚಿತ ಮಕ್ಕಳಿಗೆ ಮನೆ ಮನೆಗೆ ತೆರಳುವ ಮೂಲಕ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೊ ಹನಿ ನೀಡಲಾಗುವುದು ಎಂದು ಆರ್.ಸಿ.ಎಚ್.ಓ. ಡಾ.ಆರ್.ಐ. ಡಾ.ಗಡಾದ ಅವರು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆಸ್ಪತ್ರೆ, ತಾಲೂಕಾ ಸಾರ್ವಜನಿಕ ಆಸ್ಪತ್ರೆ, ನಗರ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದು ಎಂದು ಅವರು ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಮತ್ತಿತರರು ಉಪಸ್ಥಿತರಿದ್ದರು. ಕಾರ್ಮಿಕ ಇಲಾಖೆ, ಹೆಸ್ಕಾಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

spot_img

Related News

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ.ಗಳ ಪರಿಹಾರ : ಸಿಎಂ ಬೊಮ್ಮಾಯಿ 

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು ಹಾವೇರಿಯ ಗುರುಭವನದಲ್ಲಿ ಹಾವೇರಿ...

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -