spot_img
spot_img
spot_img
28.1 C
Belagavi
Thursday, September 29, 2022
spot_img

ಕಾಮಗಾರಿಗೆ ಶೀಘ್ರ ಟೆಂಡರ್

spot_img

ವರದಿ : ಸಾದುರೆ ಶಿವಕುಮಾರ

ಔರಾದ್ : ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಔರಾದ ಉದ್ಭವಲಿಂಗ ಅಮರೇಶ್ವರ ದೇವಸ್ಥಾನದ ಮಹಾದ್ವಾರ ಕಾಮಗಾರಿಗೆ ಯೋಜನೆ ರೂಪಿಸಿ ಶೀಘ್ರವೇ ಟೆಂಡರ್‌ ಕರೆಯಲಾಗುವುದು ಎಂದು ಸಹಾಯಕ ಆಯುಕ್ತ ಮಹ್ಮದ್ ನಯುಮ್ ತಿಳಿಸಿದರು .

ಇಲ್ಲಿಯ ಅಮರೇಶ್ವರ ದೇವಸ್ಥಾನ ಪರಿಶೀಲನೆ ನಡೆಸಿದ ಅವರು , ದೇವಸ್ಥಾನದ ಅಭಿವೃದ್ಧಿಗೆ ಪೂರಕವಾಗಿ ರುವ ಮಹಾದ್ವಾರ ಕಾಮಗಾರಿಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದರು. ದೇವಸ್ಥಾನದಲ್ಲಿನ ಸ್ವಚ್ಛತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಹಸೀಲ್ದಾರ್‌ ಅರುಣಕುಮಾರ ಕುಲಕರ್ಣಿ , ಬಸವರಾಜ ದೇಶಮುಖ , ಶರಣಪ್ಪ ಪಂಚಾಕ್ಷರಿ , ಬಸವರಾಜ ಚ್ಯಾರೆ , ಅಮರ ಎಡವೆ , ಬಸವರಾಜ ಶೆಟಕಾರ , ದಯಾನಂದ ಮುಳೆ , ಅಮರೇಶ್ವರ ಮಸ್ಕಲೆ , ರೇವಣಪ್ಪ ಜ್ಯಾಂತೆ , ಬಾಬುರಾವ ಔರಾದೆ ಇನ್ನಿತರರಿದ್ದರು .

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -