Ad imageAd image

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಆರ್‌.ಅಶೋಕ್‌

ratnakar
ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಆರ್‌.ಅಶೋಕ್‌
WhatsApp Group Join Now
Telegram Group Join Now

ಬೆಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಮಾತನಾಡಲಿದ್ದೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು.

ಉತ್ತರ ಕರ್ನಾಟಕ ಭಾಗದ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಹಣ ಇದೆ ಎಂದು ಹೇಳುತ್ತಲೇ ಇದೆ. ಆದರೂ ಉತ್ತರ ಕರ್ನಾಟಕಕ್ಕೆ ಯಾವುದೇ ಅನುದಾನ ನೀಡಿಲ್ಲ. ಎಷ್ಟು ಹೂಡಿಕೆ ಬಂದಿದೆ, ಎಷ್ಟು ಬೆಳೆಹಾನಿ ಪರಿಹಾರ ಸಿಕ್ಕಿದೆ, ನೀರಾವರಿ ಯೋಜನೆಗೆ ಎಷ್ಟು ಅನುದಾನ ನೀಡಲಾಗಿದೆ ಎಂಬ ಬಗ್ಗೆ ಉತ್ತರ ಕರ್ನಾಟಕದ ಬಿಜೆಪಿ ಶಾಸಕರು ಚರ್ಚೆ ಮಾಡಿದ್ದಾರೆ. ನಂಜುಂಡಪ್ಪ ವರದಿಗೆ ಚಾಲನೆ ನೀಡುತ್ತೇವೆ ಎಂದು ಸರ್ಕಾರ ಹೇಳಿ ವರ್ಷವಾಗುತ್ತಾ ಬಂದಿದೆ ಎಂಬುದು ಕೂಡ ಚರ್ಚೆಯಾಗಿದೆ. ಇದನ್ನು ಸದನದಲ್ಲಿ ಪ್ರಶ್ನಿಸುವ, ಮಾತನಾಡುವ ಬಗ್ಗೆ ಶಾಸಕರು ಹೇಳಿದ್ದಾರೆ. ಕಾಂಗ್ರೆಸ್‌ ಹೇಳಿದ್ದು ಏನು, ಉತ್ತರ ಕರ್ನಾಟಕಕ್ಕೆ ನೀಡಿದ್ದೇನು ಎಂಬ ಬಗ್ಗೆ ಶಾಸಕರೇ ಮಾತನಾಡಲಿದ್ದಾರೆ ಎಂದು ತಿಳಿಸಿದರು.

ಸಾರಿಗೆ ಇಲಾಖೆ ನೌಕರರು ಬಂದ್‌ ಮಾಡುತ್ತೇವೆ ಎಂದು ಹೇಳಿದ್ದಾರೆ. ಅಬಕಾರಿ ಇಲಾಖೆ ಗುತ್ತಿಗೆದಾರರು ಕೂಡ ಬಂದ್‌ ಮಾಡಲು ಮುಂದಾಗಿದ್ದರು. ಈ ನಡುವೆ ರಸ್ತೆ ಅಭಿವೃದ್ಧಿ, ಆಸ್ಪತ್ರೆ ನಿರ್ಮಾಣ, ಬೆಳೆಹಾನಿ ಪರಿಹಾರ ಯಾವುದಕ್ಕೂ ಹಣ ಇಲ್ಲ. ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡಲು ಕಲಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿತ್ತು. ಆದರೆ ಈವರೆಗೆ ಯಾವುದೇ ಯೋಜನೆಯ ಕಾರ್ಯಾದೇಶವಾಗಿಲ್ಲ ಎಂದು ದೂರಿದರು.

WhatsApp Group Join Now
Telegram Group Join Now
Share This Article