ಬೆಳಗಾವಿಯ ಟಿಳಕವಾಡಿಯ ವೀರಸೌಧ(ಕಾಂಗ್ರೆಸ್ ಬಾವಿ)ದಲ್ಲಿರುವ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಫೊಟೋ ಗ್ಯಾಲರಿಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ವೀಕ್ಷಿಸಿದರು.